ರಾಜ್ಯ

'ಕೈ' ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ನವೀನ್ ಎತ್ತಂಗಡಿ

Shilpa D

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ನವೀನ್ ಅವರನ್ನು ಎತ್ತಂಗಡಿ ಮಾಡಲಾಗಿದೆ.

ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ನವೀನ್ ಸುಪೇಕರ್ ವಿ ಅವರು ನಾಮಪತ್ರ ಸಲ್ಲಿಸುವ ದಿನ ಕಾಂಗ್ರೆಸ್ ನಾಯಕರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕೇಸ್ ದಾಖಲಿಸಿದ್ದರು.

ಎಫ್‍ಐಆರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ್ತು ಇತರರ ವಿರುದ್ಧ ಆರೋಪ ದಾಖಲಿಸಲಾಗಿತ್ತು. ಇದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಅಧಿಕಾರಿಗಳು ಪಕ್ಷಪಾತ ಅನುಸರಿಸುತ್ತಿದ್ದಾರೆ ಎಂದು  ಆರೋಪಿಸಿ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನೀಡಿದ್ದ ದೂರು ನೀಡಿತ್ತು.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಸೂಚನೆ ಮೇರೆ ನವೀನ್ ಸುಪೇಕರ್ ಅವರನ್ನು ರಾಜ್ಯ ಗುಪ್ತಚರ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಮಲ್ಲೇಶ್ವರಂನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಅನಿಲ್ ಆರ್.ಪಿ. ಅವರನ್ನು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ನೇಮಿಸಲಾಗಿದೆ.

SCROLL FOR NEXT