ಚಾಮುಂಡೇಶ್ವರಿಗೆ ಸಿಎಂ ಯಡಿಯೂರಪ್ಪ ಪುಷ್ಪಾರ್ಚನೆ 
ರಾಜ್ಯ

ಮೈಸೂರು ದಸರಾ: ಚಾಮುಂಡೇಶ್ವರಿಗೆ ಸಿಎಂ ಯಡಿಯೂರಪ್ಪ ಪುಷ್ಪಾರ್ಚನೆ, ಜಂಬೂ ಸವಾರಿಗೆ ಚಾಲನೆ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ನಾಡ ದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಚಾಲನೆ ನೀಡಿದರು.

ಮೈಸೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ನಾಡ ದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಚಾಲನೆ ನೀಡಿದರು.

ಸಿಎಂ ಯಡಿಯೂರಪ್ಪ ಅವರು ಇಂದು ಮಧ್ಯಾಹ್ನ 3.30ಕ್ಕೆ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಚಿನ್ನದ ಅಂಬಾರಿಯಲ್ಲಿ ಅಲಂಕೃತಗೊಂಡ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.

ಕೊರೋನಾ ಸೋಂಕು ನಿಯಂತ್ರಣ ಕ್ರಮಗಳ ನಡುವೆ ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ನಡೆದಿದ್ದು, ಈ ಬಾರಿ ಜಂಬೂ ಸವಾರಿ ಅರಮನೆಗೆ ಮಾತ್ರ ಸೀಮಿತವಾಗಿದೆ. ಪ್ರತಿ ವರ್ಷ 5.5 ಕಿ.ಮೀ. ಸಾಗುತ್ತಿದ್ದ ಜಂಬೂ ಸಾವಾರಿ ಈ ಬಾರಿ ಕೇವಲ 400 ಮೀಟರ್ ಗೆ ಸೀಮಿತಗೊಳಿಸಲಾಗಿತ್ತು.

ಮೆರವಣಿಗೆಯಲ್ಲಿ ಮೈಸರು ಜಿಲ್ಲಾ ಪಂಚಾಯಿತಿ ಸಿದ್ಧಪಡಿಸಿದ್ದ ಕೊರೋನಾ ಜಾಗೃತಿ ಮೂಡಿಸುವ ಒಂದು ಸ್ತಬ್ಧಚಿತ್ರ ಮಾತ್ರ ಭಾಗವಹಿಸಿತ್ತು. ಉಳಿದಂತೆ ಅಶ್ವಾರೋಹಿ ದಳದ ಎರಡು ತುಕಡಿ, ಕರ್ನಾಟಕ ಪೊಲೀಸ್ ಬ್ಯಾಂಡ್ ನ ಆನೆಗಾಡಿ ಹಾಗೂ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಮೇಲೆ ಹರಿದ ಟ್ರಕ್; 23 ಕುರಿ, 2 ಮೇಕೆ ಸಾವು, ಭೀಕರ ವಿಡಿಯೋ ಸಿಸಿಟಿವಿಯಲ್ಲಿ ಸೆರೆ!

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!