ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ತಂಡ ಪೊಲೀಸ್ ಬಲೆಗೆ
ನಗರದಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ತಂಡವೊಂದನ್ನು ಬಂಧಿಸುವಲ್ಲಿ ಮಹದೇವಪುರ ಠಾಣಾ ಪೋಲಿಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರು: ನಗರದಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ತಂಡವೊಂದನ್ನು ಬಂಧಿಸುವಲ್ಲಿ ಮಹದೇವಪುರ ಠಾಣಾ ಪೋಲಿಸರು ಯಶಸ್ವಿಯಾಗಿದ್ದಾರೆ.
ಅಂಜಲಿ, ದೀಪಕ್, ಪ್ರೇಮನಾಥ್, ಟೈಸನ್, ವಿನೋದ್, ಪ್ರಕಾಶ್, ಈಶ್ವರಿ ಬಂಧಿತ ಆರೋಪಿಗಳು. ಏಳು ಜನರ ಈ ತಂಡವು ಪೈ ಲೇಔಟ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿತ್ತು. ಈ ಸ್ಥಳಕ್ಕೆ ಶ್ರೀಮಂತ ವ್ಯಕ್ತಿಗಳನ್ನು ಕರೆಸಿ ಹನಿಟ್ರ್ಯಾಪ್ ಮಾಡುತ್ತಿದ್ದರು.
ಸಿರಿವಂತ ವ್ಯಕ್ತಿಯೊಂದಿಗೆ ಯುವತಿ ಇರುವಾಗ ಯುವತಿ ಪತಿ ಹಾಗೂ ಸ್ನೇಹಿತರಂತೆ ಮನೆಗೆ ನುಗ್ಗಿ ಮೊಬೈಲ್ನಲ್ಲಿ ದೃಶ್ಯವನ್ನು ಚಿತ್ರೀಕರಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಚಿನ್ನಾಭರಣ, ಹಣ ಕಸಿದುಕೊಳ್ಳುತ್ತಿದ್ದರು. ನಂತರ ಈ ವಿಷಯವನ್ನು ಯಾರಿಗಾದರೂ ಹೇಳಿದರೇ ವಿಡಿಯೋ ಬಹಿರಂಗಗೊಳಿಸಲಾಗುವುದು ಎಂದು ಜೀವ ಬೆದರಿಕೆ ಹಾಕುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಹ್ಯಾನಿಟ್ರ್ಯಾಪ್ ಗೆ ಒಳಗಾದ ವ್ಯಕ್ತಿ ಓರ್ವ ಮಹದೇವಪುರ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದರು. ಪ್ರಕರಣದ ಜಾಡು ಹಿಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.