ರಾಜ್ಯ

ರಾಜ್ಯದ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಮತದಾನ ಆರಂಭ

Manjula VN

ಬೆಂಗಳೂರು: ರಾಜ್ಯದ ನಾಲ್ಕು ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳ ಚುನಾವಣೆಗೆ ಬುಧವಾರ ಮತದಾನ ಆರಂಭವಾಗಿದೆ. 

ಆಗ್ನೇಯ ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಬರುವ ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ (ಚನ್ನಗಿರಿ ಮತ್ತು ಹೊನ್ನಾಳಿ ತಾಲೂಕುಗಳನ್ನು ಹೊರತುಪಡಿಸಿ) ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದೆ.

ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಬರುವ ಧಾರವಾಡ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ, ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಬರುವ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಮತದಾನ ಪ್ರಗತಿಯಲ್ಲಿವೆ.

ಇಂದು ಬೆಳಗ್ಗೆ 8 ರಿಂದ ಸಂಜೆ 5ಗಂಟೆಯವರೆಗೆ ಈ ನಾಲ್ಕೂ ಕ್ಷೇತ್ರಕ್ಕೆ ಮತದಾನ ನಡೆಯಲಿದೆ. ಎಲ್ಲಾ ನಾಲ್ಕು ಕ್ಷೇತ್ರಗಳಲ್ಲೂ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಹಾಕಿದ್ದು, ಯಾರು ಗೆಲುವು ಸಾಧಿಸುತ್ತಾರೆ? ಎಂಬುದು ಇದೀಗ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. 

ಕಳೆದ ಬಾರಿ ಜೆಡಿಎಸ್ ಪಕ್ಷದಿಂದ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಶಾಸಕ ಪುಟ್ಟಣ್ಣ ಅವರು, ಈ ಬಾರಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿರುವುದು ವಿಶೇಷವಾಗಿದೆ. ಹೀಗಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರ ಬಿಜೆಪಿ ಮತ್ತು ಜೆಡಿಎಸ್ ಪಾಲಿಗೆ ಗೆಲ್ಲಲೇಬೇಕಾದ ನಿರ್ಣಾಯಕ ಮತ್ತು ಪ್ರತಿಷ್ಠೆಯ ಕಣವಾಗಿದೆ.

SCROLL FOR NEXT