ಸಾಂದರ್ಭಿಕ ಚಿತ್ರ 
ರಾಜ್ಯ

ಲಿಫ್ಟ್ ಗಾಗಿ ತೋಡಿದ್ದ ಗುಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವು

ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಗಾಗಿ ತೋಡಿದ್ದ ಗುಂಡಿಯಲ್ಲಿ ಬಿದ್ದು ಎರಡು  ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ನಗರದ ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ‌.

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಗಾಗಿ ತೋಡಿದ್ದ ಗುಂಡಿಯಲ್ಲಿ ಬಿದ್ದು ಎರಡು  ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ನಗರದ ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ‌.

ವಿನೋದ್‌ ಕುಮಾರ್ ಮೃತಪಟ್ಟ ಮಗು. ಮೃತ ಮಗುವಿನ ತಂದೆ ಮೂಲತಃ ಕೊಪ್ಪಳ ತಾಲ್ಲೂಕಿನವರಾಗಿದ್ದು, ಬಿಜಿಎಸ್ ಆಸ್ಪತ್ರೆಯಲ್ಲಿ ಭದ್ರತಾ ಸಿಬ್ಬಂದಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ದಂಪತಿ, ನಿರ್ಮಾಣ ಹಂತದ ಕಟ್ಟಡ ಬಳಿಯ ಶೆಡ್‌ನಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.

ರಮೇಶ್ ಎಂಬುವರಿಗೆ ಸೇರಿದ್ದ ಜಾಗದಲ್ಲಿ ಕಟ್ಟಡ ನಿರ್ಮಿಸಲಾಗಿತ್ತು. ಇಂದು ಬೆಳಗ್ಗೆ ತಂದೆ ಕೆಲಸಕ್ಕೆ ತೆರಳಿದ್ದು, ತಾಯಿ ಸ್ನಾನ ಮಾಡುತ್ತಿದ್ದ ಸಮಯದಲ್ಲಿ ಮಗು ಆಟವಾಡುತ್ತಾ ಗುಂಡಿ ಬಳಿ ಹೋಗಿ ಬಿದ್ದಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಆಯೋಗದ ವಿವಾದ: CEC Gyanesh Kumar ಭಾಗಿಯಾಗಬೇಕಿದ್ದ ಯುವಕರೊಂದಿಗಿನ ಕಾರ್ಯಕ್ರಮ ದಿಢೀರ್ ರದ್ದು!

'ಯಾರು ಚಿತ್ರೀಕರಿಸುತ್ತಿದ್ದರು?': ಜಮುಯಿ ದುರಂತಕ್ಕೆ ವಿಪಕ್ಷಗಳೇ ಕಾರಣ-ಬಿಜೆಪಿ ಸಚಿವ

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ

ಬಿಹಾರದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ? ಮಂದಾರ್ ಬೆಟ್ಟದಲ್ಲಿ ಯುವತಿಗೆ ಕಾಮುಕರಿಂದ ಕಿರುಕುಳ; ಒಂದೇ ವಾರದಲ್ಲಿ 3ನೇ ಪ್ರಕರಣ..!

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!