ರಾಜ್ಯ

ಕೋವಿಡ್ ಲಸಿಕೆ: ಆರೋಗ್ಯ ಕಾರ್ಯಕರ್ತರ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿದ ರಾಜ್ಯದ ಎರಡು ಜಿಲ್ಲೆಗಳು!

Manjula VN

ದಾವಣೆಗೆರೆ: ಕೊರೋನಾ ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಆರೋಗ್ಯ ಕಾರ್ಯಕರ್ತರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಈ ಆರೋಗ್ಯ ಕಾರ್ಯಕರ್ತರ ಕುರಿತು ಮಾಹಿತಿ ಸಂಗ್ರಹಿಸುವಂತೆ ಸೂಚನೆ ನೀಡಿದೆ. ಇದರಂತೆ ಈ ಕಾರ್ಯವನ್ನು ರಾಜ್ಯದ ಎರಡು ಜಿಲ್ಲೆಗಳು ಪೂರ್ಣಗೊಳಿಸಿವೆ. 

ಜಿಲ್ಲಾ ಮಟ್ಟದ ಕಾರ್ಯಪಡೆಯ ಪ್ರಾಥಮಿಕ ಸಭೆಯಲ್ಲಿ ಮಾತನಾಡಿರುವ ದಾವಣಗೆರೆ ಜಿಲ್ಲಾಧಿಕಾರಿ ಮಹಂತೇಶ್ ಬಿಳಗಿಯವರು, ಲಸಿಕೆ ನೀಡುವಲ್ಲಿ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಹೇಳಿದ್ದಾರೆ. 

ಮೊದಲ ಹಂತದಲ್ಲಿ ಲಸಿಕೆಯನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಸೇರಿದಂತೆ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗುತ್ತದೆ. 

ಪ್ರಾಥಮಿಕ ಸಮೀಕ್ಷೆಯ ಪ್ರಕಾರ ಜಿಲ್ಲೆಯಲ್ಲಿ ಸುಮಾರು 20,000 ಆರೋಗ್ಯ ಸಿಬ್ಬಂದಿ ಇರುವುದು ತಿಳಿದುಬಂದಿದೆ. ಆದರೆ ಇನ್ನೂ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗಿಲ್ಲ ಎಂದು ಡಾ.ಜಿ.ಡಿ.ರಾಘವನ್ ತಿಳಿಸಿದ್ದಾರೆ, 

ಲಸಿಕೆಯು ಸಬ್ಕ್ಯುಟೇನಿಯಸ್, ಇಂಟ್ರಾಡರ್ಮಲ್ ಅಥವಾ ಇಂಟ್ರಾಮಸ್ಕುಲರ್ ನಲ್ಲಿದೆಯೇ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಲಸಿಕೆ ನೀಡುವವರಿಗೆ ನೀಡಲಾಗುತ್ತಿರುವ ತರಬೇತಿ ಪೂರ್ಣಗೊಂಡ ಬಳಿಕ ಈ ಬಗ್ಗೆ ವಿವರವಾದ ಮಾಹಿತಿ ಲಭ್ಯವಾಗಲಿದೆ ಎಂದಿದ್ದಾರೆ. 

ಮೊದಲ ಹಂತದಲ್ಲಿ ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಜಿಲ್ಲಾಧಿಕಾರಿಗಳು ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಆರೋಗ್ಯ ಕಾರ್ಯಕರ್ತರ ಕುರಿತು ಇನ್ನೆರಡು ದಿನಗಳಲ್ಲಿ ಮಾಹಿತಿಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕು ಎಂದು ಹೇಳಿದ್ದಾರೆ. 

ಫ್ರಂಟ್ ಲೈನ್ ಸಿಬ್ಬಂದಿಗಳ ಕುರಿತ ಪಟ್ಟಿಯು ಸಿದ್ಧಗೊಳ್ಳುತ್ತಿದೆ. ಶೀಘ್ರದಲ್ಲಿಯೇ ಸರ್ಕಾರಕ್ಕೆ ಪಟ್ಟಿಯನ್ನು ನೀಡಲಾಗುತ್ತದೆ ಎಂಡು ಚಿತ್ರದುರ್ಗ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿ.ಎಲ್.ಪಾಲಾಕ್ಷ ಅವರು ತಿಳಿಸಿದ್ದಾರೆ. 

SCROLL FOR NEXT