ತಾರಾ ಅನುರಾಧ 
ರಾಜ್ಯ

ರಾಜ್ಯದಲ್ಲಿ ಡ್ರಗ್ಸ್ ಸಂಪೂರ್ಣ ನಿಷೇಧಿಸಿ: ತಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಿ- ತಾರಾ ಅನುರಾಧ  

ರಾಜ್ಯದಲ್ಲಿ ಸಂಪೂರ್ಣವಾಗಿ ಡ್ರಗ್ಸ್ ನಿಷೇಧಿಸಿ  ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯೆ ತಾರಾ  ಅನುರಾಧಾ ಮನವಿ ಮಾಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣವಾಗಿ ಡ್ರಗ್ಸ್ ನಿಷೇಧಿಸಿ  ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯೆ ತಾರಾ  ಅನುರಾಧಾ ಮನವಿ ಮಾಡಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದೆ ಎಂದರು.ಇತ್ತೀಚೆಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು, ಕೆಲವು ಯುವ ಜನತೆ ಹಾಗೂ ಚಲನಚಿತ್ರರಂಗದ ಹಲವಾರು ಕಲಾವಿದರು ಡ್ರಗ್ಸ್ ಸೇವೆನೆ ಮಾಡುತ್ತಾರೆ ಎಂಬ ಆರೋಪಗಳು ಕೇಳಿ ಬರುತ್ತಿರುವುದು ವಿಷಾದನೀಯ ಸಂಗತಿ ಎಂದರು.

ಸುಮಾರು 4-15 ವಯಸ್ಸಿನಿಂದ 13-24 ವರ್ಷದ ವರೆಗಿನ ಯುವಕ ಹಾಗೂ ಯುವತಿಯರು ಇತ್ತೀಚಿನ ವರ್ಷಗಳಲ್ಲಿ ಕೆಲವು ಪ್ರತಿಷ್ಠಿತ ಶಾಲಾ ಕಾಲೇಜುಗಳಲ್ಲಿ  ಗಣನೀಯವಾಗಿ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದಾರೆ ಎಂದು ಹೇಳಿದರು.

ಇದನ್ನು ನಿಯಂತ್ರಣಕ್ಕೆ ತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರಯತ್ನ ಪಟ್ಟಷ್ಟು ಇತ್ತೀಚಿನ ಯುವ ಜನಾಂಗವು ಮಾದಕ  ಚಟಕ್ಕೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ ಎಂಬುದು ವಿಷಾದಕರ ಹಾಗೂ ಆತಂಕಕಾರಿ ಸಂಗತಿ ಎಂದು ತಾರಾ ಅನುರಾಧಾ ಕಳವಳ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT