ರಾಜ್ಯ

ಸಚಿವ ಕೆಎಸ್ ಈಶ್ವರಪ್ಪಗೆ ಕೊರೋನಾ ಪಾಸಿಟಿವ್

Lingaraj Badiger

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಸಚಿವ ಈಶ್ವರಪ್ಪ ಅವರು ಇಂದು ಮಧ್ಯಾಹ್ನ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನನಗೆ ಇಂದು ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ನಿನ್ನೆಯಷ್ಟೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೋನಾ ಪಾಸಿಟಿವ್ ದೃಢುಪಟ್ಟಿತ್ತು, ಈಗ ಮತ್ತೊಬ್ಬ ಸಚಿವರಿಗೆ ಕೊರೋನಾ ವಕ್ಕರಿಸಿದೆ.

SCROLL FOR NEXT