ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ: ಹಣಕ್ಕಾಗಿ ವೃದ್ಧ ದಂಪತಿ ಕೊಲೆ, ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧನ

ವೃದ್ಧ ದಂಪತಿಯನ್ನು ಕೊಲೆ ಮಾಡಿ ನಗದು ಹಾಗೂ ಚಿನ್ನಾಭರಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಹಾಸನ: ವೃದ್ಧ ದಂಪತಿಯನ್ನು ಕೊಲೆ ಮಾಡಿ ನಗದು ಹಾಗೂ ಚಿನ್ನಾಭರಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಆರೋಪಿ ಪ್ರಸಾದ್ ಅಲಿಯಾಸ್ ಗುಂಡ ಎಂಬಾತನ ಎಡಗಾಲಿನ ಮಂಡಿ ಭಾಗಕ್ಕೆ ಗುಂಡು ತಗುಲಿದ್ದು, ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಹೊರವಲಯದ ಆಲಗೋಡನಹಳ್ಳಿ ತೋಟದ ಮನೆಯಲ್ಲಿ ವಾಸವಿದ್ದ ವೃದ್ಧ ದಂಪತಿಗಳಾದ ಮುರುಳೀಧರ್(71) ಹಾಗೂ ಉಮಾದೇವಿ(67) ಅವರನ್ನು ಎರಡು ದಿನಗಳ ಹಿಂದೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಇಂದು ಕೋಳಿಫಾರಂನಲ್ಲಿ ಅಡಗಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದರೆ, ಮತ್ತೊಬ್ಬ ಆರೋಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮೈಸೂರು ದಕ್ಷಿಣ ವಲಯ ಐಜಿ ವಿಫುಲ್‌ಕುಮಾರ್ ಸುದ್ದಿಗೋಷ್ಠಿಯಲ್ಲಿ ಈ ಪ್ರಕರಣ ಸಂಬಂಧ ಮಾಹಿತಿ ನೀಡಿದ್ದು, ಪ್ರಸಾದ್‌ನ ಜೊತೆಗೆ ಬರಗೂರು ಕೊಪ್ಪಲಿನ ಮಂಜಶೆಟ್ಟಿ (23) ಎಂಬಾತನನ್ನು ಕೂಡ ಬಂಧಿಸಲಾಗಿದೆ. ಉಳಿದ ಮೂರು ಜನ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿಸಿದ್ದಾರೆ.

ಆರೋಪಿಗಳನ್ನು ಬಂಧಿಸಲು ಹೊರಟಿದ್ದ ವೇಳೆ ಪ್ರಸಾದ್ ಎಂಬಾತ ಎಸ್‌ಐ ವಿನಯ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದು, ಹೀಗಾಗಿ ಆತನ ಮೇಲೆ ಗುಂಡು ಹಾರಿಸಲಾಗಿದೆ. ಸದ್ಯ ಎಸ್‌ಐ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿಫುಲ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT