ಸಂಗ್ರಹ ಚಿತ್ರ 
ರಾಜ್ಯ

ಸದಾಶಿವನಗರದ ಸ್ಪಾ ಮೇಲೆ ಸಿಸಿಬಿ ಪೊಲೀಸರ ದಾಳಿ: 5 ಯುವತಿಯರ ರಕ್ಷಣೆ, 2 ಆರೋಪಿಗಳ ಬಂಧನ

ಸದಾಶಿವನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಸಮ್ಮರ್ ಹಿಲ್ಸ್ ಸ್ಪಾ ಹಾಗೂ ಮಸಾಜ್ ಪಾರ್ಲರ್ ಮೇಲೆ ಸಿಸಿಬಿ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದು, ಐವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. 

ಬೆಂಗಳೂರು: ಸದಾಶಿವನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಸಮ್ಮರ್ ಹಿಲ್ಸ್ ಸ್ಪಾ ಹಾಗೂ ಮಸಾಜ್ ಪಾರ್ಲರ್ ಮೇಲೆ ಸಿಸಿಬಿ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದು, ಐವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. 

ಕೊರೋನಾ ಲಾಕ್ಡೌನ್ ನಿಂದ ಸ್ಪಾಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿಲ್ಲ. ಆದರೂ ಸ್ಪಾಗಳ ಹೆಸರಿನಲ್ಲಿ ವೇಶ್ಯಾವಾಟಿಕೆಯನ್ನು ನಡೆಸಲಾಗುತ್ತಿತ್ತು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಐವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. 

ಸಿಲಿಕಾನ್ ಸಿಟಿಯ ಹಲವೆಡೆ ಮಸಾಜ್‌ ಸೆಂಟರ್‌ ಹೆಸರಿನಲ್ಲಿ ಅಕ್ರಮ ದಂಧೆಗಳನ್ನ ನಡೆಸುತ್ತಿರುವ ಆರೋಪಗಳು ಪದೇ ಪದೇ ಕೇಳಿಬರುತ್ತಲೆ ಇರುತ್ತದೆ. ದೂರು ಬಂದಾಗ ಸಿಸಿಬಿ ದಾಳಿ ನಡೆಸುತ್ತೆ. ನಂತರ ಮತ್ತೆ ಇಂತಹ ಚಟುವಟಿಕೆಗಳನ್ನ ಅದೇ ಸ್ಪಾ ನಡೆಸುತ್ತೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಸಾಮಾಜಿಕ ಕಾರ್ಯಕರ್ತರು ಮನವಿ ಮಾಡುತ್ತಲೆ ಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!