ಗೌರಿ ಲಂಕೇಶ್ ಕೂಡ ಡ್ರಗ್ ಎಡಿಟ್ ಆಗಿದ್ದರು, ಆಗ ಏಕೆ ಈ ಬಗ್ಗೆ ಪ್ರಶ್ನಿಸಲಿಲ್ಲ; ಇಂದ್ರಜಿತ್ಗೆ ಮುತಾಲಿಕ್ ಪ್ರಶ್ನೆ
ಚಂದನವನದಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಧ್ವನಿಯೆತ್ತಿರುವ ನಿರ್ದೇಶಕ ಇಂದ್ರಜಿತ್ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಟೀಕಿಸಿದ್ದಾರೆ.
ಹಾವೇರಿ: ಚಂದನವನದಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಧ್ವನಿಯೆತ್ತಿರುವ ನಿರ್ದೇಶಕ ಇಂದ್ರಜಿತ್ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಟೀಕಿಸಿದ್ದಾರೆ.
ಚಿತ್ರರಂಗ, ರಾಜಕಾರಣಿಗಳ ಮಕ್ಕಳ ಡ್ರಗ್ ದಂಧೆ ಬಗ್ಗೆ ಮಾತನಾಡುತ್ತಿರುವ ಇಂದ್ರಜಿತ್, ಅವರ ಅಕ್ಕ ಗೌರಿಲಂಕೇಶ್ ಕೂಡ ಡ್ರಗ್ ಎಡಿಟ್ ಆಗಿದ್ದರು. ಆಗ ಏಕೆ ಈ ಬಗ್ಗೆ ಪ್ರಶ್ನಿಸಲಿಲ್ಲ. ಆಕೆಯನ್ನು ಏಕೆ ಸುಧಾರಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಸ್ವಂತ ಅಕ್ಕಳನ್ನು ಸುಧಾರಿಸದ ಇಂದ್ರಜಿತ್ ಲಂಕೇಶ್ ಇಂದು ಚಿತ್ರರಂಗದ ನಟನಟಿಯರ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದಿದ್ದಾರೆ.
ಇಂದ್ರಜಿತ್ ಲಂಕೇಶ್ ಅವರು ಕನ್ನಡ ಚಿತ್ರರಂಗದ ಕೆಲ ನಟ-ನಟಿಯರು ಡ್ರಗ್ಸ್ ಮಾಫಿಯಾದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ಈ ಸಂಬಂಧ ಸಿಸಿಬಿ ಪೊಲೀಸರಿಗೆ ಮಾಹಿತಿಯನ್ನು ಒದಗಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.