ರಾಜ್ಯ

ಜೆಎಂಬಿ ಉಗ್ರರೊಂದಿಗೆ ನಂಟು ಇಬ್ಬರು ಶಂಕಿತರ ಬಂಧನ

Manjula VN

ಕಾರವಾರ: ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ್ (ಜೆಎಂಬಿ) ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಶಂಕೆ ಮೇರೆಗೆ ರಾಜ್ಯ ಇಬ್ಬರು ವ್ಯಕ್ತಿಗಳನ್ನು ರಾಜ್ಯ ಆಂತರಿಕ ಭದ್ರತಾ ಪಡೆ ಹಾಗೂ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. 

ಶಿರಸಿ ಮೂಲದ ವ್ಯಕ್ತಿ ಹಾಗೂ ಬನವಾಸಿಯ ನಿವಾಸಿಯಾಗಿರುವ ಇಬ್ಬರು ವ್ಯಕ್ತಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆಂದು ತಿಳಿದುಬಂದಿದೆ. 

ಇಬ್ಬರು ವ್ಯಕ್ತಿಗಳು ಜೆಎಂಬಿ ಸಂಘಟನೆಯ ಉಗ್ರ ಜಹಿದುಲ್ ಇಸ್ಲಾಂ ಅಲಿಯಾಕ್ ಕೌಸರ್ ಜೊತೆಗೆ ನಂಟು ಹೊಂದಿರುವ ಮಾಹಿತಿ ತಿಳಿದುಬಂದ ಹಿನ್ನೆಲೆಯಲ್ಲಿ, ಈ ಮಾಹಿತಿ ಆಧರಿಸಿ ಶಿರಸಿಗೆ ಬಂದಿರುವ ಅಧಿಕಾರಿಗಳು ಈ ಇಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆ. 

ಶಿರೂರು ಮದರಸಾ ಟೀಚರ್‌ ಜೆಎಂಬಿ ಉಗ್ರರ ಚಟುವಟಿಕೆಗಳಿಗೆ ಸಾಥ್ ಕೊಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ಮದರಸಾ ಟೀಚರ್ ಮತಿನ್‌ನನ್ನು ವಶಕ್ಕೆ ಪಡೆದಿದ್ದಾರೆಂದು ಹೇಳಲಾಗುತ್ತಿದೆ. ಈತನ ಬಳಿಯಿದ್ದ 9 ಸಿಮ್‌ಗಳನ್ನು ಭಯೋತ್ಪಾದಕ ಸಂಘಟನೆಯ ನೇಮಕಾತಿಗೆ ಬಳಸಿಕೊಳ್ಳಲಾಗುತ್ತಿತ್ತು ಎಂದು ಹೇಳಲಾಗುತ್ತಿದ್ದು, ಈ ಕುರಿತು ತನಿಖೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. 

SCROLL FOR NEXT