ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ 116 ಬಲಿ, ಬೆಂಗಳೂರಿನಲ್ಲಿ 2,963 ಸೇರಿ 9,280 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ ಬರೋಬ್ಬರಿ 9,280 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,79,486ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಇಂದು 116 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6170ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 25 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 116 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2963 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 9280 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು 6161 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 2,74,196ಕ್ಕೆ ಏರಿಕೆಯಾಗಿದೆ. 99,101 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 785 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೆಂಗಳೂರು ಹೊರತುಪಡಿಸಿದರೆ ಮೈಸೂರಿನಲ್ಲಿ 776, ಬೆಳಗಾವಿ, 278, ಬಳ್ಳಾರಿಯಲ್ಲಿ 447 ಪಾಸಿಟಿವ್‌ ಕೇಸ್‌ಗಳು ಕಂಡುಬಂದಿವೆ. 

ಇನ್ನು, ಬಾಗಲಕೋಟೆ 98, ಬೆಂಗಳೂರು ಗ್ರಾಮಾಂತರ 204, ಬೀದರ್‌ 36, ಚಾಮರಾಜನಗರ 56, ಚಿಕ್ಕಬಳ್ಳಾಪುರ 206, ಚಿಕ್ಕಮಗಳೂರು 223, ಚಿತ್ರದುರ್ಗ 92 ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 428 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

SCROLL FOR NEXT