ಬಾಲಗಂಗಾಧರನಾಥ, ಡಾ. ಶಿವಕುಮಾರ ಸ್ವಾಮೀಜಿ 
ರಾಜ್ಯ

ಡಾ.ಶಿವಕುಮಾರ ಸ್ವಾಮೀಜಿ, ಬಾಲಗಂಗಾಧರನಾಥ ಸ್ವಾಮೀಜಿ ಜನ್ಮ ಸ್ಥಳವನ್ನು ಪಾರಂಪರಿಕ ತಾಣವಾಗಿಸಲು ಸರ್ಕಾರ ಬದ್ಧ- ಸಿ.ಟಿ. ರವಿ

ನಡೆದಾಡುವ ದೇವರೆಂದೇ ವಿಶ್ವಾದ್ಯಂತ ಮನೆಮಾತಾಗಿರುವ ಡಾ.ಶಿವಕುಮಾರ ಸ್ವಾಮೀಜಿ ಹಾಗೂ ಡಾ.ಬಾಲಗಂಗಾಧರನಾಥ ಸ್ವಾಮಿಜಿಯವರ ಜನ್ಮ ಸ್ಥಳವನ್ನು ವಿಶ್ವ ದರ್ಜೆಯ ಪಾರಂಪರಿಕ" ತಾಣವನ್ನಾಗಿ ಪರಿವರ್ತಿಸುವ ಯೋಜನೆಗೆ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ನಡೆದಾಡುವ ದೇವರೆಂದೇ ವಿಶ್ವಾದ್ಯಂತ ಮನೆಮಾತಾಗಿರುವ ಡಾ.ಶಿವಕುಮಾರ ಸ್ವಾಮೀಜಿ ಹಾಗೂ ಡಾ.ಬಾಲಗಂಗಾಧರನಾಥ ಸ್ವಾಮಿಜಿಯವರ ಜನ್ಮ ಸ್ಥಳವನ್ನು ವಿಶ್ವ ದರ್ಜೆಯ ಪಾರಂಪರಿಕ" ತಾಣವನ್ನಾಗಿ ಪರಿವರ್ತಿಸುವ ಯೋಜನೆಗೆ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ.

ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅನವಶ್ಯಕವಾದ ಹಾಗೂ ಸತ್ಯಕ್ಕೆ ದೂರವಾದ ತಪ್ಪು ಮಾಹಿತಿಯನ್ನು ಸಾರ್ವಜನಿಕರಿಗೆ ಸಂದೇಶ ರವಾನಿಸುತ್ತಿವೆ.ಇಂತಹ ವದಂತಿಗಳಿಗೆ ಯಾರೊಬ್ಬರೂ ಕಿವಿಗೊಡಬಾರದೆಂದು ಮನವಿ ಮಾಡಿದ್ದಾರೆ.

ತಾವು ಇಬ್ಬರೂ ಶ್ರೀಗಳ ಬಗ್ಗೆ ಅಪಾರವಾದ ಭಕ್ತಿ, ಗೌರವ, ಶ್ರದ್ಧೆಗಳನ್ನು ಇಟ್ಟುಕೊಂಡಿದ್ದೇನೆ.ಶಿಕ್ಷಣ, ಅನ್ನ, ಅಕ್ಷರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸಲ್ಲಿಸಿರುವ ಸೇವೆ ನಾಗರೀಕ ಸಮಾಜಕ್ಕೆ ಮಾದರಿಯಾಗಿದೆ. ಶ್ರೀಗಳ ಜನ್ಮಸ್ಥಳವನ್ನು ಸ್ಮಾರಕವನ್ನಾಗಿ ಅಭಿವೃದ್ಧಿಪಡಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿ. ಟಿ. ರವಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ