ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಎಫೆಕ್ಟ್: ರಾಜ್ಯ ವಿಧಾನಸಭಾ ಅಧಿವೇಶನದಲ್ಲೂ ರದ್ದುಗೊಳ್ಳಲಿದೆಯೇ ಪ್ರಶ್ನೋತ್ತರ ಅವಧಿ?

ರಾಜ್ಯ ವಿಧಾನಮಂಡಲ ಅಧಿವೇಶನದಲ್ಲೂ ಸಂಸತ್ ಮಾದರಿಯಲ್ಲಿ ಪ್ರಶ್ನೋತ್ತರ ಅವಧಿಯನ್ನು ಕಡಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. 

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನದಲ್ಲೂ ಸಂಸತ್ ಮಾದರಿಯಲ್ಲಿ ಪ್ರಶ್ನೋತ್ತರ ಅವಧಿಯನ್ನು ಕಡಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. 

ನಿನ್ನೆಯಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿಯವರು, ಲೋಕಸಭೆ ಮಾದರಿಯಲ್ಲೇ ರಾಜ್ಯ ವಿಧಾನಮಂಡಲದಲ್ಲಿಯೂ ಪ್ರಶ್ನೋತ್ತರ ಅವಧಿ ರದ್ದುಗೊಳಿಸಬೇಕೇ ಎಂಬ ಬಗ್ಗೆ ಚಿಂತನೆಗಳನ್ನು ನಡೆಸಿದ್ದೇವೆ. ಈ ರೀತಿ ಮಾಡಬೇಕೆ ಅಥವಾ ಬೇಡವೇ? ಎಂಬ ಬಗ್ಗೆ ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ತೀರ್ಮಾನ ಮಾಡಲಾಗುವುದು. ಈ ವೇಳೆ ವಿಪಕ್ಷದ ನಾಯಕರ ಅಭಿಪ್ರಾಯವನ್ನೂ ಪಡೆಯಲಾಗುವುದು ಎಂದು ಹೇಳಿದ್ದಾರೆ. 

ಇದೇ ವೇಳೆ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ), ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ), ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ (ಎರಡನೇ ತಿದ್ದುಪಡಿ) ಸೇರಿದಂತೆ ಇಪ್ಪತ್ತರಿಂದ 25 ವಿಧೇಯಕಗಳನ್ನು ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ. 

ಅಧಿವೇಶನದ ವೇಳೆ ಹಲವು ಮಸೂದೆಗಳನ್ನು ಸರ್ಕಾರ ಮಂಡನೆ ಮಾಡಲಿದ್ದು, ಇದರಿಂದ ಚರ್ಚೆಗೆ ಕಾಲಾವಕಾಶ ಸಿಗುವುದಿಲ್ಲ ಎಂಬ ವಿಪಕ್ಷಗಳ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, 18-20 ಸುಗ್ರೀವಾಜ್ಞೆ ಬದಲಿ ಮಸೂದೆಗಳು ಸೇರಿದಂತೆ ಸುಮಾರು 30 ಮಸೂದೆಗಳನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಬೇಕಾಗುತ್ತದೆ. ಮಸೂದೆ ಮಂಡನೆ ಕುರಿತಂತೆ ಈಗಾಗಲೇ ಚರ್ಚೆಗಳನ್ನು ನಡೆಸಲಾಗಿದೆ. ಅಧಿವೇಶನದ ವೇಳಾಪಟ್ಟಿಯನ್ನು ವಾರದೊಳಗೆ ಪ್ರಕಟಿಸಲಾಗುತ್ತದೆ. 

ಜಲಾನಯನ ಅಭಿವೃದ್ಧಿ ಯೋಜನೆಯಿ ವಿಶ್ವಬ್ಯಾಂಕ್ ನೆರವಿನೊಂದಿಗೆ ರೂ.600 ಕೋಟಿ ವೆಚ್ಚದಲ್ಲಿ 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜಲ ಸಮೃದ್ಧಿ ಕಾರ್ಯಕ್ರಮಕ್ಕೆ ಸಂಪುಟ ಅನುಮೋದನೆ ನೀಡಿದೆ. ಕರ್ನಾಟಕ ಕೃಷಿ ಬೆಲೆ ಆಯೋಗದ ಅವಧಿಯನ್ನು 2023ರವರೆಗೆ ವಿಸ್ತರಿಸಲು ಸಂಪುಟ ಒಪ್ಪಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ಅನುಷ್ಠಾನ ಸಂಬಂಧ ಕ್ಲಸ್ಟರ್ ವಾರು ವಿಮಾ ಕಂಪನಿಗಳ ನಿಗದಿಗೆ ಅನುಮೋದನೆ ನೀಡಲಾಗಿದೆ. 

ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ ವಿಧೇಯಕವನ್ನು ಮಂಡಿಸಲಾಗುವುದು. ಸಾರ್ವ ಜನಿಕ ಆಸ್ತಿಪಾಸ್ತಿ ನಷ್ಟ ಉಂಟುಮಾಡಿದವರಿಗೆ ಮಾರುಕಟ್ಟೆ ದರದ ದುಪ್ಪಟ್ಟು ದಂಡ ವಿಧಿಸುವುದು ಇದರಲ್ಲಿ ಸೇರಿದೆ. ಅಧ್ಯಾದೇಶ ಮೂಲಕ ಜಾರಿಗೊಳಿಸಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿ ಸಹಿತ ಹಲವು ತಿದ್ದುಪಡಿಗಳಿಗೆ ಸಂಬಂಧಿಸಿ ವಿಧೇಯಕ ಮಂಡಿಸಲು ಸಂಪುಟದಲ್ಲಿ ಒಪ್ಪಿಗೆ ದೊರೆತಿದೆ ಸಚಿವರು ಮಾಹಿತಿ ನೀಡಿದ್ದಾರೆ. 

2020-21ನೇ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಡಿಜಿಟಲ್ ಲರ್ನಿಂಗ್ ಯೋಜನೆಯನ್ನು ಈ ವರ್ಷದಿಂದ ಜಾರಿಗೊಳಿಸಲು ತೀರ್ಮಿಸಲಾಗಿದ್ದು, 430 ಪ್ರಥಮದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್ ಮತ್ತು 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ರೂ.35 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. 

ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಎಲ್'ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸುವ ಕುರಿತು ಚರ್ಚೆ ನಡೆಯಿತು. ಈ ವೇಳೆ ಮೂಲ ಸೌಕರ್ಯ, ನುರಿತ ಶಿಕ್ಷಕರ ಕೊರತೆ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಬಹುದು. ಹೀಗಾಗಿ 276 ಪಬ್ಲಿಕ್ ಶಾಲೆಗಳಲ್ಲಿ (ಸರ್ಕಾರಿ ಆಂಗ್ಲ ಹಾಗೂ ಕನ್ನಡ ಮಾಧ್ಯಮ ಶಾಲೆಗಳಲ್ಲಿ) ಪ್ರಾರಂಭಿಸಲು ನಿರ್ಧರಿಸಲಾಯಿತು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT