ಪ್ರಜ್ವಲ್ ರೇವಣ್ಣ 
ರಾಜ್ಯ

ಪ್ರಜ್ವಲ್ ರೇವಣ್ಣ ಅಫಿಡವಿಟ್ ವಿವಾದ: ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಚುನಾವಣಾ ಆಯೋಗ ಸೂಚನೆ

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಕೆ ವಿಚಾರವಾಗಿ ವರದಿ ಸಲ್ಲಿಸುವಂತೆ ದಾಖಲಿಸಿರುವ ದೂರಿನ ಅನ್ವಯ ಆಯೋಗವು ಸೂಕ್ತ ವರದಿ ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ನೋಟಿಸ್ ನೀಡಿದೆ. ಹಾಗಾಗಿ ಜಿಲ್ಲಾಧಿಕಾರಿಗಳು ನ್ಯಾಯಸಮ್ಮತ ವರದಿ ಸಲ್ಲಿಸಿವಂತೆ ಮಾಜಿ ಸಚಿವ ಹಾಗೂ ಕಳೆದ ಲೋಕಸಭಾ ಚುನಾವಣೆಯ ಪರಾಜಿತ...

ಹಾಸನ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಕೆ ವಿಚಾರವಾಗಿ ವರದಿ ಸಲ್ಲಿಸುವಂತೆ ದಾಖಲಿಸಿರುವ ದೂರಿನ ಅನ್ವಯ ಆಯೋಗವು ಸೂಕ್ತ ವರದಿ ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ನೋಟಿಸ್ ನೀಡಿದೆ. ಹಾಗಾಗಿ ಜಿಲ್ಲಾಧಿಕಾರಿಗಳು ನ್ಯಾಯಸಮ್ಮತ ವರದಿ ಸಲ್ಲಿಸಿವಂತೆ ಮಾಜಿ ಸಚಿವ ಹಾಗೂ ಕಳೆದ ಲೋಕಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ಎ.ಮಂಜು ಅವರು ಮನವಿ ಮಾಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ತಮ್ಮ ಆದಾಯಗಳನ್ನು ಮುಚ್ಚಿಟ್ಟು ನಕಲಿ ಆದಾಯ ದೃಢಿಕರಣ ಪತ್ರ ನೀಡಿದ್ದರು. ಈ ವಿಚಾರವಾಗಿ ನಾನು ಕೇಂದ್ರ ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಿದ್ದೆ. ಇದನ್ನು ವಿಚಾರಣೆ ನಡೆಸುತ್ತಿರುವ ಆಯೋಗ ಈ ಸಂಬಂಧ ದಾಖಲಾತಿಗಳನ್ನು ಪರಿಶೀಲಿಸಿ ಸೂಕ್ತ ವರದಿ ನೀಡುವಂದೆ ಜಿಲ್ಲಾಧಿಕಾರಿಗಳಿಗೆ ನೋಟಿಸ್ ನೀಡಿದೆ. ಹಾಗಾಗಿ ಜಿಲ್ಲಾಧಿಕಾರಿಗಳು ಸೂಕ್ತ ದಾಖಲಾತಿಗಳನ್ನು ಒಳಗೊಂಡ ವರದಿಯನ್ನು ನೀಡುವಂತೆ ಮನವಿ ಮಾಡಿದರು. 

ಚುನಾವಣಾ ಆಯೋಗಕ್ಕೆ ಹೀಗೆ ನಕಲಿ ದಾಖಲೆ ಸಲ್ಲಿಸಿ ನಂತರ ಸದಸ್ಯತ್ವವೇ ವಜಾಗೊಂಡ ಉದಾಹರಣಗಳಿವೆ. ಈ ಪ್ರಕರಣದಲ್ಲೂ ಹೀಗೇ ಆಗಲಿದೆ. ಹಾಗಾಗಿ ಮತ್ತೆ ನಾನೇ ಸಂಸದನಾಗುತ್ತೇನೆಂದು ಮಂಜು ಅವರು ವಿಶ್ವಾಸ ವ್ಯಕ್ತಪಡಿಸಿದರು. 

ಪ್ರಜ್ವಲ್ ರೇವಣ್ಣ ಅವರು ನಾಪತ್ರದೊಂದಿಗೆ ಸಲ್ಲಿಸಿರುವ ಆದಾಯ ದೃಢೀಕರಣ ಪತ್ರದಲ್ಲಿ ತಮ್ಮ ಆದಾಯದ ಕೆಲವೊಂದು ಅಂಶಗಳನ್ನು ಮರೆಮಾಚಿದ್ದಾರೆ. ಈ ಅಂಶವನ್ನು ಪರಿಗಣಿಸಿ ನಾನು 2019ರಲ್ಲಿಯೇ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೆ. ಈ ಪ್ರಕರಣದಲ್ಲಿ ನನಗೆ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT