ನಟಿ ರಾಗಿಣಿಗೂ ಬಿಜೆಪಿಗೂ ಯಾವ ಸಂಬಂಧವಿಲ್ಲ: ಸಚಿವ ಸಿಟಿ ರವಿ
ರಾಗಿಣಿಗೂ ನಮ್ಮ ಅಕ್ಷಕ್ಕೂ ಯಾವ ಸಂಬಂಧವಿಲ್ಲ ಎಂದು ಸಚಿವ ಸಿಟಿ ರವಿ ಹೇಳಿದ್ದಾರೆ. ಡ್ರಗ್ಸ್ ದಂಧೆಯ ಪ್ರಕರಣದಲಿ ಬಂಧಿತರಾಗಿರುವ ನಟಿ ರಾಗಿಣಿ ಈ ಹಿಂದೆ ಉಪ ಚುನಾವಣೆ ವೇಳೆ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದ ವೀಡಿಯೋಗಳು ಹರಿದಾಡಿದ ಬೆನ್ನಲ್ಲೇ ಸಚಿವರು ಈ ಹೇಳಿಕೆ ನೀಡಿದ್ದಾರೆ.
ಚಿಕ್ಕಮಗಳೂರು: ರಾಗಿಣಿಗೂ ನಮ್ಮ ಅಕ್ಷಕ್ಕೂ ಯಾವ ಸಂಬಂಧವಿಲ್ಲ ಎಂದು ಸಚಿವ ಸಿಟಿ ರವಿ ಹೇಳಿದ್ದಾರೆ. ಡ್ರಗ್ಸ್ ದಂಧೆಯ ಪ್ರಕರಣದಲಿ ಬಂಧಿತರಾಗಿರುವ ನಟಿ ರಾಗಿಣಿ ಈ ಹಿಂದೆ ಉಪ ಚುನಾವಣೆ ವೇಳೆ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದ ವೀಡಿಯೋಗಳು ಹರಿದಾಡಿದ ಬೆನ್ನಲ್ಲೇ ಸಚಿವರು ಈ ಹೇಳಿಕೆ ನೀಡಿದ್ದಾರೆ.
"ನಮ್ಮದು ಕಾಂಪ್ರಮೈಸ್, ಅಡ್ಜೆಸ್ಟ್ ಮೆಂಟ್ ಮಾಡಿಕೊಳ್ಳುವ ಪಕ್ಷವಲ್ಲ. ಯಾರಾದರೂ ತಪ್ಪು ಮಾಡಿದ್ದವರಿಗೆ ಶಿಕ್ಷೆ ಆಗಲೇಬೇಕು" ಸುದ್ದಿಗಾರರೊಡನೆ ಮಾತನಾಡಿದ ಸಚಿವರು ಹೇಳಿದ್ದಾರೆ.
"ರಾಗಿಣಿಯವರಿಗೆ ನೇರವಾಗಿ ಪಕ್ಷದ ಯಾವ ಜವಾಬ್ದಾರಿ ಇಲ್ಲ. ನಟಿಯಾಗಿ ಅವರಿಗೆ ಅವರದೇ ಸ್ಥಾನವಿದೆ.ಬಿಜೆಪಿಗೂ ಅವರಿಗೂ ಯಾವ ಸಂಬಂಧವಿಲ್ಲ.ಡ್ರಗ್ಸ್ ಪ್ರಕರಣ ತನಿಖೆ ನಡೆಯುತ್ತಿದೆ. ಮುಂದೆ ಅಗತ್ಯವಾದರೆ ಕೇಂದ್ರದ ಸಹಾಯ ಪಡೆಯಬಹುದು ಎಂದು ಸಚಿವರು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.