ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೋವಿಡ್-19 ಸೋಂಕಿನಿಂದ ಗುಣಮುಖರಾದವರಿಗೆ ಮತ್ತೆ ಸೋಂಕು: ಬೆಂಗಳೂರಿನಲ್ಲಿ ಮೊದಲ ಪ್ರಕರಣ ದೃಢ

ಕೋವಿಡ್-19 ಸೋಂಕಿನಿಂದ ಗುಣಮುಖರಾದವರಿಗೆ ಮತ್ತೆ ಸೋಂಕು ಕಾಣಿಸಿಕೊಳ್ಳುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಪ್ರಕರಣ ದೃಢಪಟ್ಟಿದೆ.

ಸಾಂದರ್ಭಿಕ ಚಿತ್ರ
Nagaraja AB
Updated On : 6 Sept 2020, 6:23 pm

ಬೆಂಗಳೂರು: ಕೋವಿಡ್-19 ಸೋಂಕಿನಿಂದ ಗುಣಮುಖರಾದವರಿಗೆ ಮತ್ತೆ ಸೋಂಕು ಕಾಣಿಸಿಕೊಳ್ಳುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಪ್ರಕರಣ ದೃಢಪಟ್ಟಿದೆ.

ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದ 27 ವರ್ಷದ ಮಹಿಳೆಯೊಬ್ಬರಿಗೆ ಮತ್ತೆ ಕೋರೊನಾ ಸೋಂಕು ಕಂಡುಬಂದಿದೆ ಎಂದು ನಗರದ ಪೋರ್ಟಿಸ್ ಆಸ್ಪತ್ರೆ ತಿಳಿಸಿದೆ.

ಜುಲೈನಲ್ಲಿ ಆ ಮಹಿಳೆಗೆ ಪಾಸಿಟಿವ್ ಕಂಡುಬಂದಿದ್ದರಿಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಆದಾಗ್ಯೂ, ಒಂದು ತಿಂಗಳಲ್ಲಿ ಲಘು ಲಕ್ಷಣಗಳು ಕಂಡುಬಂದಿದ್ದು, ಮತ್ತೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement