ರಾಜ್ಯ

ಸೆ.7ರಿಂದ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗಾಗಿ ಉಚಿತ ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯ

Vishwanath S

ಬೆಂಗಳೂರು: ರಾಜ್ಯದಲ್ಲಿ ಸೆ. 7ರಿಂದ ನಡೆಯಲಿರುವ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ. 

ಸೆ.7ರಿಂದ 19ರವರೆಗೆ ನಡೆಯಲಿರುವ ಪರೀಕ್ಷೆಯ ಕೇಂದ್ರಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯಲು ಮತ್ತು ಮರಳಿ ಕರೆತರಲು ಉಚಿತ ಬಸ್‌ ವ್ಯವಸ್ಥೆ ಕಲ್ಪಿಸಿರುವುದಾಗಿ ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಕೂಡ ಬಸ್‌ ವ್ಯವಸ್ಥೆ ಕಲ್ಪಿಸಲಾಗುವುದು. ವಿದ್ಯಾರ್ಥಿಗಳು ಬಸ್‌ನಲ್ಲಿ ಪ್ರಯಾಣಿಸಲು ಪರೀಕ್ಷೆಯ ಹಾಲ್‌ಟಿಕೆಟ್‌ ತೋರಿಸಬೇಕು ಎಂದು ಪ್ರಕಟಣೆ ಮಾಹಿತಿ ನೀಡಿದೆ.

SCROLL FOR NEXT