ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ 141 ಬಲಿ, 5,773 ಮಂದಿಗೆ ಪಾಸಿಟಿವ್, 4 ಲಕ್ಷ ಗಡಿ ದಾಟಿದ ಸೋಂಕು!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಬರೋಬ್ಬರಿ 5,773 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,04,324ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಇಂದು 141 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6,534ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 48 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 141 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,942 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 5,773 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು 8,015 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,00,770ಕ್ಕೆ ಏರಿಕೆಯಾಗಿದೆ. 97,001 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

SCROLL FOR NEXT