ರಾಜ್ಯ

ರಾಜ್ಯದ ವಿದ್ಯಾರ್ಥಿಗಳಿಗೆ ಎನ್‌ಎಲ್‌ಎಸ್‌ಐಯುನಲ್ಲಿ ಶೇ 25 ಮೀಸಲಾತಿಗೆ ಹೈಕೋರ್ಟ್ ತಡೆ

Raghavendra Adiga

ಬೆಂಗಳೂರು: ರಾಜ್ಯದಲ್ಲಿ ಅಧ್ಯಯನ ಮಾಡಿದವರಿಗೆ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯ (ಎನ್‌ಎಲ್‌ಎಸ್‌ಐಯು) ನಲ್ಲಿ ಶೇ 25 ರಷ್ಟು ಮೀಸಲಾತಿ ನೀಡುವಂತೆ ಕರ್ನಾಟಕ ವಿಧಾನಸಭೆ ಜಾರಿಗೆ ತಂದ ತಿದ್ದುಪಡಿ ಕಾಯ್ದೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿ ಬಿ.ವಿ.ನಾಗರತ್ನ, ನ್ಯಾಯಮೂರ್ತಿ ರವಿ ಹೊಸ್ಮನಿ ಅವರನ್ನೊಳಗೊಂಡ ವಿಭಾಗೀಯ ಪೀಠವು ತಿದ್ದುಪಡಿಯ ವಿರುದ್ಧಅರ್ಜಿಗಳನ್ನು ಆಲಿಸಿದ ನಂತರ ಎನ್‌ಎಲ್‌ಎಸ್‌ಐಯು (ತಿದ್ದುಪಡಿ) ಕಾಯ್ದೆ 2020 ಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಈ ವರ್ಷದ ಮಾರ್ಚ್‌ನಲ್ಲಿ ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ಕಾಲ ಅಧ್ಯಯನ ಮಾಡಿದವರಿಗೆ ಎನ್‌ಎಲ್‌ಎಸ್‌ಐಯುನಲ್ಲಿ ಶೇ 25 ರಷ್ಟುಮೀಸಲಾತಿ ನೀಡಲು ರಾಜ್ಯ ವಿಧಾನಸಭೆ ಎನ್‌ಎಲ್‌ಎಸ್‌ಐಯು (ತಿದ್ದುಪಡಿ) ಕಾಯ್ದೆ 2020 ಅನ್ನು ಅಂಗೀಕರಿಸಿತು.  ಇದರ ವಿರುದ್ಧ ಕಾನೂನು ವಿದ್ಯಾರ್ಥಿಗಳು ಮತ್ತು ಇತರರು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಗಳನ್ನು ಸಲ್ಲಿಸಿದ್ದರು.

SCROLL FOR NEXT