ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ: ಸಾಮಾಜಿಕ ಅಂತರ ನಿಯಮ ಕೈಬಿಟ್ಟ ಕೆಎಸ್ಆರ್'ಟಿಸಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತು ಇತರ ಬಸ್‌ಗಳಲ್ಲಿನ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಹಿಂಪಡೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. 

ಕಲಬುರಗಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತು ಇತರ ಬಸ್‌ಗಳಲ್ಲಿನ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಹಿಂಪಡೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. 

ಸುದ್ದಿಗಾರರೊಂಡಿದೆ ಮಾತನಾಡಿದ ಅವರು, “ಸಾರ್ವಜನಿಕರು ಇನ್ನು ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅಗತ್ಯವಿಲ್ಲ. ದ್ವಿಚಕ್ರ, ತ್ರಿಚಕ್ರ ಅಥವಾ ವಿಮಾನಗಳಲ್ಲಿ ಯಾವುದೇ ನಿರ್ಬಂಧಗಳನ್ನು ಅನುಸರಿಸಲಾಗುತ್ತಿಲ್ಲ. ಹೀಗಿರುವಾಗ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ನಿರ್ಬಂಧಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಆದರೆ, ಬಸ್‌ಗಳಲ್ಲಿ ಪ್ರಯಾಣಿಸುವಾಗ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಬೇಕೆಂದು ಹೇಳಿದ್ದಾರೆ. 

ರಾಜ್ಯದ ವಿವಿಧ ಮಾರ್ಗಗಳಲ್ಲಿ ಬಸ್ ಗಳು ಸಂಚಾರ ನಡೆಸುತ್ತಿವೆ. ಬೇಡಿಕೆಗಳಿಗೆ ಅನುಗುಣವಾಗಿ ಬಸ್ ಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಕರ್ನಾಟಕ ಮತ್ತು ಆಂಧ್ಯಪ್ರದೇಶದ ನಡುವೆ ಬಸ್ ಗಳನ್ನು ಬಿಡಲಾಗಿದೆ. ತೆಲಂಗಾಣ, ತಮಿಳುನಾಡು, ಗೋವಾ ಹಾಗೂ ಪಾಂಡಿಚೆರಿ ರಾಜ್ಯಗಳಿಗೂ ಪತ್ರ ಪರೆಯಲಾಗಿದ್ದು, ಅಂತರ್ ರಾಜ್ಯ ಬಸ್ ಗಳ ಸೇವೆ ಪ್ರಾರಂಭಿಸುವಂತೆ ತಿಳಿಸಿದೆ. ಆದರೆ, ಈ ವರೆಗೂ ಆ ರಾಜ್ಯಗಳಿಂದ ಯಾವುದೇ ಪ್ರತಿಕ್ರಿಯೆಗಳೂ ಬಂದಿಲ್ಲ. ಈ ಕುರಿತು ಶೀಘ್ರದಲ್ಲಿಯೇ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತದೆ. ಮಹಾರಾಷ್ಟ್ರ ರಾಜ್ಯಕ್ಕಿನ್ನೂ ಪತ್ರ ಬರೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಸಾರಿಗೆ ಇಲಾಖೆಗೆ ಪ್ರತೀನಿತ್ಯ ರೂ.2.5 ಕೋಟಿ ನಷ್ಟ ಎದುರಾಗುತ್ತಿದೆ. ಆದರೂ, ಸಿಬ್ಬಂದಿಗಳಿಗೆ ಸರ್ಕಾರದ ಅನುದಾನದಲ್ಲಿ ವೇತನವನ್ನು ನೀಡಲಾಗುತ್ತಿದೆ ಎಂದಿದ್ದಾರೆ. 

ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆ ಯಾವಾಗ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ನಿರ್ಧಾರ ಮುಖ್ಯಮಂತ್ರಿಗಳಿಗೆ ಬಿಟ್ಟದ್ದಾಗಿದೆ. ಅಧಿವೇಶನಕ್ಕೂ ಮುನ್ನ ಅಥವಾ ಅಧಿವೇಶನದ ಬಳಿಕವಾದರೂ ನಡೆಯಬಹುದು. ಈ ಬಗ್ಗೆ ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜೊತೆಗೆ ಸಭೆ ನಡೆಸಿ ಅಂತಿನ ನಿರ್ಧಾರ ಕೈಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT