ರಾಜ್ಯ

ಈ ವರ್ಷ ಬೆಂಗಳೂರಿಗೆ ಪ್ರತ್ಯೇಕ ಕಾನೂನು ಜಾರಿ: ಡಾ. ಸಿಎನ್ ಅಶ್ವತ್ಥನಾರಾಯಣ

Vishwanath S

ಬೆಂಗಳೂರು: ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಮತ್ತಿತರೆ ಮೂಲಭೂತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರು ನಗರಕ್ಕೆ ಪ್ರತ್ಯೇಕ ಕಾಯ್ದೆಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಸರಕಾರ ಹೆಜ್ಜೆಗಳನ್ನಿಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್ಲರಿಗೂ ಗೊತ್ತಿರುವಂತೆ ಬೆಂಗಳೂರು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರ. ಇದು ಇತರೆ ನಗರಗಳಂತೆ ಅಲ್ಲ. ದಿನೇದಿನೆ ರಾಜ್ಯದ ಮೂಲೆಮೂಲೆಗಳಿಂದ, ಇತರೆ ರಾಜ್ಯಗಳಿಂದ ಇಲ್ಲಿಗೆ ವಲಸೆ ಬರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. 

ಹೀಗಾಗಿ ಪ್ರತ್ಯೇಕ ಕಾಯ್ದೆ ಅಗತ್ಯವಾಗಿದೆ. ಈಗಾಗಲೇ ಅದಕ್ಕೆ ಸಂಬಂಧಿಸಿದ ಕೆಎಂಸಿ ಕಾಯ್ದೆ ವ್ಯಾಪ್ತಿಯಲ್ಲಿ ನಗರವನ್ನು ನಿರ್ವಹಿಸಲು ಸಾಧ್ಯವಿಲ್ಲ. ಈಗಾಗಲೇ ಮಸೂದೆಯನ್ನು ಮಂಡಿಸಲಾಗಿದ್ದು, ಅದು ಜಂಟಿ ಸದನ ಸಮಿತಿ ಪರಿಶೀಲನೆಯಲ್ಲಿದೆ. ಸದನದ ಒಪ್ಪಿಗೆ ಪಡೆದ ನಂತರ ಅದನ್ನು ಕಾಯ್ದೆಯಾಗಿ ಜಾರಿ ಮಾಡಲಾಗುವುದು ಎಂದರು.

ಬೆಂಗಳೂರಿಗೆ ಪಕ್ಕಾ ಪ್ಲ್ಯಾನ್‌ ಬೇಕು:

ಬೆಂಗಳೂರು ದೇಶದಲ್ಲಿಯೇ ಅತಿದೊಡ್ಡ ಉದ್ಯೋಗ ತಾಣವೂ ಆಗುತ್ತಿದೆ. ಹೀಗಾಗಿ ನಗರಕ್ಕೆ ಅತ್ಯುತ್ತಮ ಪ್ಲ್ಯಾನಿಂಗ್‌ ಬೇಕು, ಉತ್ತಮ ಸಹಕಾರ ಬೇಕು ಹಾಗೂ ಯೋಜನೆಗಳನ್ನು ಜಾರಿ ಮಾಡಲು ಅತ್ಯುತ್ತಮವಾದ ವ್ಯವಸ್ಥೆ ಬೇಕು. ಇವೆಲ್ಲ ಹಿನ್ನೆಲೆಯಲ್ಲಿ ನಗರಕ್ಕೆ ಪ್ರತ್ಯೇಕ ಕಾಯ್ದೆ ತರಲು ಸರಕಾರ ಮುಂದಾಗಿದೆ ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.

SCROLL FOR NEXT