ಗೋಪಾಲಯ್ಯ 
ರಾಜ್ಯ

ಪಡಿತರ ಅಕ್ರಮ ತಡೆಯಲು ರಾಜ್ಯ ಮಟ್ಟದಲ್ಲಿ ಜಾಗೃತ ದಳ ರಚನೆ: ಗೋಪಾಲಯ್ಯ

ಪಡಿತರ ಅಕ್ರಮ ತಡೆಯುವ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಜಾಗೃತ ದಳ ರಚನೆ ಮಾಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ‌ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ

ಹಾಸನ: ಪಡಿತರ ಅಕ್ರಮ ತಡೆಯುವ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಜಾಗೃತ ದಳ ರಚನೆ ಮಾಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ‌ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.

ಚನ್ನರಾಯಪಟ್ಟಣ ದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಡಿತರ ಅಕ್ರಮ ದಾಸ್ತಾನು ಮಾರಾಟ ಮಾಡುತ್ತಿರುವ ದೂರುಗಳು‌ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಜಂಟಿ ನಿರ್ದಶಕರ ನೇತೃತ್ವದಲ್ಲಿ ಜಾಗೃತದಳ ರಚನೆಗೆ ಚಿಂತನೆ ನಡೆಸಲಾಗಿದೆ.

ಈ ಮೂಲಕ ಅಕ್ರಮ ತಡೆಗೆ ಕಠಿಣ ಕ್ರಮವಹಿಸಲಾಗಿದೆ ಎಂದರು. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನಲ್ಲಿ 800 ಚೀಲ ರಾಗಿ ಅಕ್ರಮ ಸಾಗಾಣೆ ಬಗ್ಗೆ ಮಾಹಿತಿ ಪಡೆಯಲಾಗಿದೆ ಅಲ್ಲದೆ ಜಿಲ್ಲಾ ಆಹಾರ ಉಪ ನಿರ್ದೇಶಕ ರೊಂದಿಗೆ ಮಾತನಾಡಿದ್ದು ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT