ಸಿಸಿಬಿ ಪೊಲೀಸರ ವಶದಲ್ಲಿರುವ ನಟಿ ಸಂಜನಾ 
ರಾಜ್ಯ

ಸ್ಯಾಂಡಲ್'ವುಡ್ ಡ್ರಗ್ಸ್ ದಂಧೆ: 30 ಮಂದಿ ಹೆಸರು ಬಾಯ್ಬಿಟ್ಟ ಸಂಜನಾ, ರಾಗಿಣಿ, ಮತ್ತೋರ್ವ ಪ್ರಮುಖ ನಟಿ ಮನೆ ಮೇಲೆ ಸಿಸಿಬಿ ದಾಳಿ ಸಾಧ್ಯತೆ!

ಮಾದಕ ವಸ್ತು ಮಾರಾಟ ಜಾಲದ ಪ್ರಕರಣದಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ವಿಚಾರಣೆ ವೇಳೆ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರು ರಾಜಕೀಯ ಗಣ್ಯರ ಪುತ್ರರು, ಹಿರಿಯ ಸರ್ಕಾರಿ ಅಧಿಕಾರಿಗಳು ಸೇರಿದಂತೆ 30 ಮಂದಿ ಪ್ರಮುಖರ ಹೆಸರನ್ನು ಬಹಿರಂಗಪಡಿಸಿದ್ದಾರೆಂದು ತಿಳಿದುಬಂದಿದೆ. 

ಬೆಂಗಳೂರು: ಮಾದಕ ವಸ್ತು ಮಾರಾಟ ಜಾಲದ ಪ್ರಕರಣದಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ವಿಚಾರಣೆ ವೇಳೆ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರು ರಾಜಕೀಯ ಗಣ್ಯರ ಪುತ್ರರು, ಹಿರಿಯ ಸರ್ಕಾರಿ ಅಧಿಕಾರಿಗಳು ಸೇರಿದಂತೆ 30 ಮಂದಿ ಪ್ರಮುಖರ ಹೆಸರನ್ನು ಬಹಿರಂಗಪಡಿಸಿದ್ದಾರೆಂದು ತಿಳಿದುಬಂದಿದೆ. 

ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಹಾಗೂ ರಾಗಿಣಿ ಇಬ್ಬರನ್ನು ಪ್ರತ್ಯೇಕವಾಗಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಪಾರ್ಟಿಗಳಲ್ಲಿ ಡ್ರಗ್ಸ್ ತೆಗೆದುಕೊಳ್ಳುತ್ತಿರುವುದಾಗಿ ಇಬ್ಬರೂ ನಟಿಯರು ತಪ್ಪೊಪ್ಪಿಕೊಂಡಿದ್ದು, ದಂಧೆಯಲ್ಲಿ ಭಾಗಿಯಾಗಿರುವ ಹಲವು ಪ್ರಮುಖರ ಹೆಸರುಗಳನ್ನು ಬಾಯ್ಬಿಟ್ಟಿದ್ದಾರೆಂದು ತಿಳಿದುಬಂದಿದೆ. 

ಇಬ್ಬರೂ ನಟಿಯರು ದಂಧೆಯಲ್ಲಿ ಭಾಗಿಯಾಗಿರುವ 30 ಮಂದಿಯ ಹೆಸರನ್ನು ನೀಡಿದ್ದು, ಎರಡೂ ಪಟ್ಟಿಯಲ್ಲಿರುವ ಹೆಸರುಗಳು ಒಂದೇ ರೀತಿಯಲ್ಲಿವೆ. ಇದರಲ್ಲಿ ಪ್ರಮುಖ ರಾಜಕೀಯ ಗಣ್ಯರ ಪುತ್ರರು, ಸಂಸದರು, ಶಾಸಕರ ಹೆಸರುಗಳಿವೆ ಎನ್ನಲಾಗುತ್ತಿದೆ. ಆದರೆ, ಈ ವ್ಯಕ್ತಿಗಳ ಮನೆಗಳ ಮೇಲೆ ದಾಳಿ ಮಾಡಲು ಅಧಿಕಾರಿಗಳ ಬಳಿ ಸೂಕ್ತ ಸಾಕ್ಷ್ಯಾಧಾರಗಳು ಅಧಿಕಾರಿಗಳಿಗೆ ಲಭ್ಯವಾಗಿಲ್ಲ ಎನ್ನಲಾಗುತ್ತಿದೆ. 

ಈ ಕುರಿತು ಸಾಕ್ಷ್ಯಾಧಾರಗಳನ್ನು ಪತ್ತೆ ಮಾಡಲಾಗುತ್ತಿದೆ. ಕೆಲ ಹಿರಿಯ ಅಧಿಕಾರಿಗಳ ಕುಟುಂಬ ಸದಸ್ಯರ ಹೆಸರುಗಳನ್ನು ನಟಿಯರಿಬ್ಬರೂ ಬಾಯ್ಬಿಟ್ಟಿದ್ದು, ಇವರ ಮನೆಗಳ ಮೇಲೆ ದಾಳಿ ನಡೆಸಲು ಸಿಸಿಬಿ ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. 

ಈ ನಡುವೆ ಡ್ರಗ್ಸ್ ದಂಧೆಯಲ್ಲಿ ಮತ್ತೋರ್ವ ಪ್ರಮುಖ ನಟಿ ಕೂಡ ಭಾಗಿಯಾಗಿದ್ದಾರೆಂಬ ಮಾಹಿತಿಗಳು ತಿಳಿದುಬಂದಿದೆ. ಆ ನಟಿಯ ಕುರಿತು ಸಾಕ್ಷ್ಯಾಧಾರಗಳನ್ನು ಕಲೆ ಹಾಕಿರುವ ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಲು ಸಿದ್ಧತೆ ನಡೆಸಿದ್ದಾರೆಂದು ತಿಳಿದುಬಂದಿದೆ. 

ರಾಜಕೀಯ ನಾಯಕರೊಂದಿಗೆ ನಟಿ ಸಂಜನಾ ಗಲ್ರಾನಿಯವರು ಸಾಕಷ್ಟು ಆಪ್ತರಾಗಿದ್ದು, ಪ್ರಕರಣ ಸಂಬಂಧ ಹೆಸರು ಕೇಳಿ ಬಂದಿರುವ ಆರೋಪಿಗಳೊಂದಿಗೂ ಸಂಪರ್ಕದಲ್ಲಿದ್ದರು ಎಂದ ಹೇಳಲಾಗುತ್ತಿದೆ. ಆದರೆ, ರಾಜಕೀಯ ನಾಯಕರಿಗೆ ಇವರ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದಿತ್ತೋ, ಇಲ್ಲವೋ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಈ ನಡುವೆ ಮೂರು ದಿನಗಳ ಹಿಂದಷ್ಟೇ ಬಂಧನಕ್ಕೊಳಪಡಿಸಿದ್ದ ಉದ್ಯಮಿ ಪ್ರಶಾಂತ್ ರಂಕಾ ಕುರಿತು ಮಾಹಿತಿ ಕಲೆ ಹಾಗಿರುವ ಪೊಲೀಸರು ಈತನ ವಿರುದ್ಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. 

ಇನ್ನು ಪ್ರಕರಣ ಸಂಬಂಧ ತಮ್ಮ ವಿರುದ್ಧ ಆರೋಪ ಮಾಡುತ್ತಿರುವ ಪ್ರಶಾಂತ್ ಸಂಬರಗಿ ವಿರುದ್ಧ ಕಾಂಗ್ರೆಸ್ ಶಾಸಕ ಝಮೀರ್ ಅಹ್ಮದ್ ಅವರು ಪ್ರಕರಣ ದಾಖಲಿಸಿದ್ದಾರೆ. 

ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಈ ಸಂಬಂಧ ವಿಚಾರಣೆಗೊಳಪಡಿಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!