ರಾಜ್ಯ

ಕೇಂದ್ರ ಸಚಿವ ಸುರೇಶ್ ಅಂಗಡಿಗೆ ಕೊರೋನಾ ದೃಢ

Raghavendra Adiga

ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಸಚಿವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. 

"ನಾನು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ."

"ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ." ಎಂದು ಸಚಿವರು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

SCROLL FOR NEXT