ಸಾರಾ ಮಹೇಶ್ 
ರಾಜ್ಯ

ಜೆಡಿಎಸ್ ಸರ್ಕಾರ ಪತನಕ್ಕೆ ಡ್ರಗ್ ಮಾಫಿಯಾ ಹಣ ಬಳಕೆ: ಕುಮಾರಸ್ವಾಮಿ ಹೇಳಿಕೆ ಹಾಸ್ಯಾಸ್ಪದವಲ್ಲ- ಸಾರಾ ಮಹೇಶ್  

ಜೆಡಿಎಸ್ ಸರ್ಕಾರವನ್ನು ಪತನಗೊಳಿಸಲು ಡ್ರಗ್ ಮಾಫಿಯಾ ಹಣವನ್ನು ಬಳಸಿಕೊಳ್ಳಲಾಗಿತ್ತು ಎಂಬ ಕುಮಾರಸ್ವಾಮಿ ಹೇಳಿಕೆ ಹಾಸ್ಯಾಸ್ಪದ ಅಲ್ಲ ಎಂದು ಮಾಜಿ ಸಚಿವ ಸಾ. ರಾ. ಮಹೇಶ್ ಹೇಳಿದ್ದಾರೆ.

ಬೆಂಗಳೂರು: ಜೆಡಿಎಸ್ ಸರ್ಕಾರವನ್ನು ಪತನಗೊಳಿಸಲು ಡ್ರಗ್ ಮಾಫಿಯಾ ಹಣವನ್ನು ಬಳಸಿಕೊಳ್ಳಲಾಗಿತ್ತು ಎಂಬ ಮಾಜಿ ಮುಖ್ಯಮಂತ್ರಿ ಎಚ್ ಡಿ. ಕುಮಾರಸ್ವಾಮಿ ಹೇಳಿಕೆ ಹಾಸ್ಯಾಸ್ಪದ ಅಲ್ಲ ಎಂದು ಮಾಜಿ ಸಚಿವ ಸಾ. ರಾ. ಮಹೇಶ್ ಹೇಳಿದ್ದಾರೆ.

ತಮ್ಮ ಸರ್ಕಾರವನ್ನು ಪತನಗೊಳಿಸಲು ಡ್ರಗ್ ಮಾಫಿಯಾ ಹಣವನ್ನು ಬಳಸಿಕೊಳ್ಳಲಾಗಿತ್ತು ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಹಾಸ್ಯಾಸ್ಪದವಾದದ್ದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಟೀಕಿಸಿದ್ದರು.

ಕುಮಾರಸ್ವಾಮಿ ಹೇಳಿಕೆ ಹಾಸ್ಯಾಸ್ಪದ ಎಂದು ಸವದಿ ಹೇಳುತ್ತಾರೆ.ಸದನದಲ್ಲಿ ನೀಲಿ ಚಿತ್ರ ನೋಡುವವರು ಉಪ ಮುಖ್ಯಮಂತ್ರಿಯಾಗಿರುವುದನ್ನು ನೋಡಿ ಜನರು ನಗುತ್ತಿದ್ದಾರೆ ಎಂದು ಸಾರಾ ಮಹೇಶ್ ಹೇಳಿದ್ದಾರೆ.

ತಾವು ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಡ್ರಗ್ ಮಾಫಿಯಾದ ವಿರುದ್ಧದ ಸರ್ಕಾರದ ಕ್ರಮಕ್ಕೆ ಹೆದರಿ ಕೆಲವರು ಶ್ರೀಲಂಕಾಕ್ಕೆ ತೆರಳಿದ್ದರು. ಡ್ರಗ್ ಮಾಫಿಯಾ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆಯ ಹಣದಿಂದ ತಮ್ಮ ಸರ್ಕಾರವನ್ನು ಪತನಗೊಳಿಸಲಾಯಿತು ಎಂದು ಕುಮಾರಸ್ವಾಮಿ ಸುದ್ದಿಗೋಷ್ಟಿಯಲ್ಲಿ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT