ಪ್ರಶಾಂತ್ ಸಂಬರಗಿ 
ರಾಜ್ಯ

ಮುಂದಿನ ಶುಕ್ರವಾರ ಮತ್ತೆ ವಿಚಾರಣೆ- ಪ್ರಶಾಂತ್ ಸಂಬರಗಿ

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ನಡೆಸಿದ ಸಾಮಾಜಿಕ ಕಾರ್ಯಕರ್ತ, ಚಲನಚಿತ್ರ ವಿತರಕ ಪ್ರಶಾಂತ್ ಸಂಬರಗಿ ವಿಚಾರಣೆ ಮುಕ್ತಾಯವಾಗಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ನಡೆಸಿದ ಸಾಮಾಜಿಕ ಕಾರ್ಯಕರ್ತ, ಚಲನಚಿತ್ರ ವಿತರಕ ಪ್ರಶಾಂತ್ ಸಂಬರಗಿ ವಿಚಾರಣೆ ಮುಕ್ತಾಯವಾಗಿದೆ.

ವಿಚಾರಣೆ ಮುಗಿಸಿ ಸಿಸಿಬಿ ಕಚೇರಿಯಿಂದ ಹೊರಬಂದ ಸಂಬರಗಿ ಸುದ್ದಿಗಾರರೊಡನೆ ಮಾತನಾಡಿ, ಸಿಸಿಬಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ ನನ್ನ ಬಳಿಯಿದ್ದ ಸಾಕ್ಷ್ಯಗಳನ್ನು ನೀಡಿದ್ದೇನೆ. ಶೇಕ್ ಫಾಜಿಲ್ ಹಾಗೂ ಶಾಸಕ ಜಮೀರ್ ಅಹಮದ್‍ ನಂಟಿಗೆ ಸಂಬಂಧಿಸಿ ವಿಚಾರಣೆ  ಮಾಡುವಂತೆ ಸಿಸಿಬಿಗೆ ಮನವಿ ಮಾಡಿದ್ದೇನೆ ಎಂದರು. 

ಕೊಲಂಬೋದ  ಕ್ಯಾಸಿನೋಗೆ ಹೋಗಿರುವುದಾಗಿ ಸ್ವತಃ ಜಮೀರ್ ಅಹಮದ್ ಒಪ್ಪಿಕೊಂಡಿರುವ ಕಾರಣ ಅದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಪ್ರಶಾಂತ್ ಸಂಬರಗಿ ತಿಳಿಸಿದರು.

ನಟಿ ಸಂಜನಾ ಅವರ ಬಗ್ಗೆ ಯಾವ ದಾಖಲೆ ನೀಡಿಲ್ಲ, ಐಟಿ, ಇಡಿ ಕುರಿತು ಏನನ್ನೂ ಮಾತನಾಡಿಲ್ಲ. ಜೊತೆಗೆ ಯಾವುದೇ ನಟ, ನಟಿಯರ ಬಗ್ಗೆ ನಾನು ದಾಖಲೆ ನೀಡಿಲ್ಲ. ನಾನು ಯಾವುದೇ ಪಕ್ಷದ ವಕ್ತಾರನಾಗಿ ಕೆಲಸ ಮಾಡುತ್ತಿಲ್ಲ. ರಾಜಕೀಯ ಪ್ರೇರಿತವಾಗಿ ಈ ಅಭಿಯಾನ ನಡೆಸುತ್ತಿಲ್ಲ ಎಂದು ಸಹ ಅವರು ಹೇಳಿದರು.

ತಮ್ಮ ವಿರುದ್ಧದ ಎಫ್ ಐಆರ್ ಬಗ್ಗೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸುತ್ತೇನೆ.ನಾನು ಗಾಳಿಯಲ್ಲಿ ಗುಂಡು ಹೊಡೆಯುವುದಿಲ್ಲ, ಸದ್ಯ ಯಾವುದೇ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ, ಜಮೀರ್ ಮತ್ತು ಪಾಜಿಲ್ ಮದ್ಯದ ವ್ಯವಹಾರದ ಬಗ್ಗೆ ಹೆಚ್ಚಿನ ಚರ್ಚೆ ಆಗಬೇಕು ಎಂದು ಸಂಬರಗಿ ಹೇಳಿದರು.

ಇದಕ್ಕೂ ಮುನ್ನ ಶಾಸಕ ಜಮೀರ್ ಅಹ್ಮದ್ ಖಾನ್ ಅವರ 50 ನೇ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಿವುಡ್ ನಟರಾದ ಸಂಜಯ್ ದತ್, ಜಾಕಿ ಶ್ರಾಫ್, ಶಕ್ತಿ ಕಪೂರ್, ಅಫ್ತಾಬ್ ಶಿವದಾಸನಿ ಸೇರಿದಂತೆ ಹಲವರು ಭಾಗಿಯಾಗಿದ್ದರು ಎಂದು ಪ್ರಶಾಂತ್ ಸಂಬರಗಿ ಹೊಸ ಬಾಂಬ್ ಸಿಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT