ರಾಜ್ಯ

ವೇತನ ಪರಿಷ್ಕರಣೆ ವಿವಾದ: ಸರ್ಕಾರಕ್ಕೆ ಕೊರೋನಾ ಮಾಹಿತಿ ನೀಡದಿರಲು ವೈದ್ಯರ ನಿರ್ಧಾರ!

Vishwanath S

ಬೆಂಗಳೂರು: ಕೋವಿಡ್‌ ಪ್ರಕರಣಗಳು ತಾರಕಕಕ್ಕೇರಿರುವ ಬೆನ್ನಲ್ಲೇ ಮತ್ತೊಮ್ಮೆ ಆರೋಗ್ಯ ಇಲಾಖೆ ಮತ್ತು ಸರ್ಕಾರದ ನಡುವೆ ಘರ್ಷಣೆ ಆರಂಭಗೊಂಡಿದೆ. 

ವೇತನ ಪರಿಷ್ಕರಣೆಗೆ ಸರ್ಕಾರ ಕ್ರಮಕೈಗೊಂಡಿಲ್ಲ ಎಂಬ ಕಾರಣ ನೀಡಿ, ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4,968 ವೈದ್ಯರು ಸೆ.15ರಿಂದ ಎಲ್ಲ ಸರ್ಕಾರಿ ಸಭೆಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ವೇತನ ಪರಿಷ್ಕರಣೆ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಸರ್ಕಾರಕ್ಕೆ ಒಂದು ವಾರದ ಗಡವು ನೀಡಿತ್ತು. ಆದರೆ, ಸರ್ಕಾರವು ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಂಘದ ಅಧ್ಯಕ್ಷ ಡಾ.ಜಿ.ಎ. ಶ್ರೀನಿವಾಸ್ ನೇತೃತ್ವದಲ್ಲಿ ಶನಿವಾರ ಸಭೆ ನಡೆಸಿದ ವೈದ್ಯರು, ಆನ್‌ಲೈನ್‌ ಸಹಿತ ಎಲ್ಲ ಸರ್ಕಾರಿ ಸಭೆಗಳಿಂದ ದೂರ ಉಳಿಯಲು ತೀರ್ಮಾನಿಸಿದ್ದಾರೆ. 

ಜೊತೆಗೆ, ಸರ್ಕಾರಕ್ಕೆ ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಯಾವುದೇ ವರದಿಯನ್ನು ಸಲ್ಲಿಸದಿರಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಆದರೆ, ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿ, ಎಲ್ಲ ರೀತಿಯ ವೈದ್ಯಕೀಯ ಸೇವೆಯನ್ನು ಮುಂದುವರೆಸಲಿದ್ದೇವೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

SCROLL FOR NEXT