ರಾಜ್ಯ

ಡ್ರಗ್ಸ್ ಮಾಫಿಯಾ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಭೆ ಕರೆಯಿರಿ: ಸಿಎಂಗೆ ಎಂಎಲ್ಸಿ ಲೆಹರ್ ಸಿಂಗ್ ಸಿರೋಯಾ ಪತ್ರ

Manjula VN

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಂಸದರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳನ್ನು ಕರೆದು ಸಭೆ ನಡೆಸುವಂತೆ ಬಿಜೆಪಿ ಹಿರಿಯ ಮುಖಂಡ ಮತ್ತು ವಿಧಾನ ಪರಿಷತ್ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರು ಮನವಿ ಮಾಡಿಕೊಂಡಿದ್ದಾರೆ. 

ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿರೋಯಾ ಅವರು, ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಡ್ರಗ್ಸ್ ದಂಧೆ ಪ್ರಕರಣದ ತನಿಖೆಯಲ್ಲಿ ಯಾರೊಬ್ಬರೂ ಮಧ್ಯೆ ಪ್ರವೇಶ ಮಾಡುವುದಿಲ್ಲ ಎಂಬುದಕ್ಕೆ ಬದ್ಧವಾಗಿರಬೇಕಿದೆ. ಶಿಕ್ಷಣ ಸಂಸ್ಥೆ, ಹೋಟೆಲ್, ಪಬ್ ಗಳು ಹಾಗೂ ಯಾವುದೇ ಸ್ಥಳಗಳಲ್ಲಿ ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ. 

ಬಾಲಾಪರಾಧಿಗಳು ಹಾಗೂ ಶಾಲಾ ಮಕ್ಕಳು ಡ್ರಗ್ಸ್ ಮಾಫಿಯಾಗೆ ಬಲಿಯಾಗುತ್ತಿದ್ದಾರೆಂಬುದು ಗಂಭೀರವಾದ ವಿಚಾರವಾಗಿದೆ. ಸೂಕ್ತ ಹಾಗೂ ಸಮಯೋಚಿತ ಮಾರ್ಗದರ್ಶನಗಳಿಲ್ಲದ ಕಾರಣ ಹದಿಹರೆಯದವರು ದುರ್ಬಲರಾಗುತ್ತಿದ್ದಾರೆ. ಡ್ರಗ್ಸ್ ದಂಧೆ ಕುರಿತ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಅತ್ಯಗತ್ಯವಿದೆ. ಈ ನಿಟ್ಟಿನಲ್ಲಿ ಎನ್‌ಡಿಪಿಎಸ್ ಕಾಯ್ದೆಯನ್ನು ಬಲಪಡಿಸುವಂತಹ ಹಾಗೂ ಸರಿಪಡಿಸುವ ಕ್ರಮವನ್ನು ಸರ್ಕಾರ ತೆಗೆದುಕೊಳ್ಳುವುದು ಅತ್ಯಗತ್ಯವಿದೆ ಎಂದು ತಿಳಿಸಿದ್ದಾರೆ. 

SCROLL FOR NEXT