ಸಂಗ್ರಹ ಚಿತ್ರ 
ರಾಜ್ಯ

ಸ್ಯಾಂಡಲ್'ವುಡ್ ಡ್ರಗ್ಸ್ ದಂಧೆಗೆ ಹವಾಲಾ ನಂಟು: ತನಿಖೆ ಆರಂಭಿಸಿದ ಇಡಿ!

ಸ್ಯಾಂಡಲ್'ವುಡ್ ಡ್ರಗ್ಸ್ ದಂಧೆಗೆ ಹವಾಲಾ ನಂಟಿದೆ ಎಂಬ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. 

ಬೆಂಗಳೂರು: ಸ್ಯಾಂಡಲ್'ವುಡ್ ಡ್ರಗ್ಸ್ ದಂಧೆಗೆ ಹವಾಲಾ ನಂಟಿದೆ ಎಂಬ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. 

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಯಾಂಡಲ್'ವುಡ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಇಬ್ಬರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಸಿಸಿಬಿ ಪೊಲೀಸರು ಇಬ್ಬರನ್ನೂ ಬಂಧನಕ್ಕಕೊಳಪಡಿಸಿದ್ದಾರೆ.
 
ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕೂಡ ನಡೆದಿರುವ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಕೂಡ ತನಿಖೆ ನಡೆಸುತ್ತಿದೆ. ಆದರೆ, ಈ ಸಂಬಂಧ ನಟಿ ರಾಗಿಣಿ ಹಾಗೂ ಸಂಜನಾ ಇಬ್ಬರಿಗೂ ಯಾವುದೇ ನೋಟಿಸ್ ಗಳನ್ನು ಜಾರಿ ಮಾಡಿಲ್ಲ ಎಂದು ಮೂಲಗಳು ಮಾಹಿತಿ ನೀಡಿವೆ. 

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾಗಿರುವುದು ಕಂಡು ಬಂದಿದೆ. ಇದು ಸಣ್ಣ ಮಟ್ಟದ ಪ್ರಕರಣವಲ್ಲ. ದೊಡ್ಡ ದೊಡ್ಡ ಕೈಗಳು ಇದರಲ್ಲಿ ಸೇರಿವೆ. ಕಾಟನ್ ಪೇಟೆ ಡ್ರಗ್ಸ್ ಪ್ರಕರಣವಲ್ಲದೆ, ಇದೇ ವಾರ ನಗರ ಪೊಲೀಸರು ಕಲಬುರಗಿಯಲ್ಲಿ ರೂ.6 ಕೋಟಿ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. 

ಇನ್ನು ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಪೊಲೀಸರು ದಾಖಲು ಮಾಡಿಕೊಂಡಿರುವ ಎಫ್ಐಆರ್ ಗಳನ್ನು ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್