ರಾಜ್ಯ

ರೈತ ವಿರೋಧಿ ಕಾಯ್ದೆಗಳ ವಿರುದ್ಧ ಹೋರಾಟ ಅನೀವಾರ್ಯ- ಸಿದ್ದರಾಮಯ್ಯ

Nagaraja AB

ಬೆಂಗಳೂರು: ಒಂದು ಕಡೆ ರೈತರ ಅಭಿವೃದ್ಧಿ ಬಗ್ಗೆ ಭಾಷಣ ಬಿಗಿಯುವುದು, ಮತ್ತೊಂದು ಕಡೆ ರೈತ ವಿರೋಧಿ ಕಾಯಿದೆಯನ್ನು ಜಾರಿ ಮಾಡುವುದು ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೆಂಗಳೂರಿನ ಗಾಂಧಿಭವನದಲ್ಲಿಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್  ಬರೆದಿರುವ "ರೈತರ ಭದ್ರತೆ-ದೇಶದ ಭದ್ರತೆ" ಪುಸ್ತಕ ಲೋಕಾರ್ಪಣೆ ಮಾಡಿ ಬಳಿಕ ಸಿದ್ದರಾಮಯ್ಯ ಮಾತನಾಡಿದರು‌.

ರೈತರನ್ನು ಶೋಷಿಸುವ ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿ, ಎಪಿಎಂಸಿ ತಿದ್ದುಪಡಿ ಕಾಯ್ದೆ ತರುವುದು ಸರಿಯಲ್ಲ. ಸರ್ಕಾರ ಈಗಾಗಲೇ ಇರುವ ಶೋಷಣೆಯನ್ನು ತಪ್ಪಿಸಬಹುದಿತ್ತು. ಆದರೆ ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿ ಮಾಡಿದೆ. ಬಲವಂತವಾಗಿ ಬಾರ ಹೊರಿಸಿದರೆ ಹೊರಬೇಕಷ್ಟೆ. ಈ ಕಾಯ್ದೆಯಿಂದ ರೈತರಿಗೆ ಅನುಕೂಲವಾಗುವುದಿಲ್ಲ. ಕೇಂದ್ರದ ಮುಂದೆ ರಾಜ್ಯ ಸರ್ಕಾರ ಕೋಲೆ ಬಸವನಂತಾಗಿದೆ ಎಂದು ಟೀಕಿಸಿದರು‌.

ರಾಜ್ಯ ಸರ್ಕಾರದ ಜನ ವಿರೋಧಿ, ರೈತ ವಿರೋಧಿ ಕಾಯ್ದೆಗಳ ವಿರುದ್ಧ ಸದನದಲ್ಲಿ ಸುಧೀರ್ಘ ಚರ್ಚೆ ನಡೆಸಿ ಅವುಗಳ ಸಾಧಕ- ಬಾಧಕಗಳನ್ನು ರಾಜ್ಯದ ಜನರ ಮುಂದೆ ಇಡಬೇಕು ಎಂಬುದು ನಮ್ಮ ಆಶಯ. ಆದರೆ, ಈ ಬಾರಿಯ ಅಧಿವೇಶನದಲ್ಲಿ ಪ್ರಮುಖ ವಿಚಾರಗಳ ಚರ್ಚೆಗೆ ಅಗತ್ಯ ಸಮಯ ಸಿಗುವುದೇ ಅನುಮಾನವೆಂತಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

SCROLL FOR NEXT