ರಾಜ್ಯ

ಮಂಡ್ಯ, ಮೈಸೂರಿನಲ್ಲಿ ಪ್ರತ್ಯೇಕ ಅಪಘಾತ: ಮೂವರು ಸಾವು

Vishwanath S

ಬೆಂಗಳೂರು: ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಮೃತಪಟ್ಟು ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಎರಡು ಕಾರು ಮತ್ತು ಮೋಟಾರ್ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೊಂದೆಡೆ ಮೈಸೂರು ಜಿಲ್ಲೆಯ ಹುಣಸೂರು ಬಳಿ ರಾಜ್ಯ ರಸ್ತೆ ಸಾರಿಗೆ ಬಸ್‌ಗೆ ಮೋಟಾರ್ ಸೈಕಲ್ ಡಿಕ್ಕಿ ಹೊಡೆದ ಪರಿಣಾಮವಾಗಿ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸವಾರರು  ಮೃತಪಟ್ಟಿದ್ದಾರೆ ಎಂದು ಹುಣಸೂರು ಪೊಲೀಸರು ತಿಳಿಸಿದ್ದಾರೆ.

SCROLL FOR NEXT