ರಾಜ್ಯ

ಕರ್ನಾಟಕಕ್ಕೆ ಕೊರೋನಾಘಾತ: ರಾಜ್ಯದಲ್ಲಿಂದು 119 ಬಲಿ, 8,244 ಮಂದಿಗೆ ಪಾಸಿಟಿವ್, 8,865 ಮಂದಿ ಡಿಸ್ಚಾರ್ಜ್!

Vishwanath S

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. ಇಂದು 8,244 ಮಂದಿ ಕೊರೋನಾಗೆ ತುತ್ತಾಗಿದ್ದರೆ 119 ಮಂದಿ ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,67,689ಕ್ಕೇರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 119 ಮಂದಿ ಮೃತಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,384ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 37 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 119 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,966 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,73,628ಕ್ಕೆ ಏರಿಕೆಯಾಗಿದೆ.

ಇಂದು 8,865 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,61,823ಕ್ಕೆ ಏರಿಕೆಯಾಗಿದೆ. 98,463 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 795 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

SCROLL FOR NEXT