ರಾಜ್ಯ

ಹೆಚ್ಚು ಸೋಂಕಿತರ ಸಂಖ್ಯೆ: ಮುಂಬೈನಗರಿ ಹಿಂದಿಕ್ಕಿದ ರಾಜಧಾನಿ, ಬೆಂಗಳೂರಿಗೆ 2ನೇ ಸ್ಥಾನ

Manjula VN

ಬೆಂಗಳೂರು: ದೇಶದ ಮಹಾನಗರಗಳ ಪೈಕಿ ಅತೀ ಹೆಚ್ಚು ಸೋಂಕಿತ ಪ್ರಕರಣಗಳನ್ನು ಹೊಂದಿದ ನಗರಗಳ ಪೈಕಿ ರಾಜಧಾನಿ ಬೆಂಗಳೂರು ಎರಡನೇ ಸ್ಥಾನಕ್ಕೇರಿದೆ. 

ರಾಜಧಾನಿ ಬೆಂಗಳೂರಿನಲ್ಲಿ ಸುಮಾರು 40ಕ್ಕೂ ಹೆಚ್ಚು ಕೊರೋನಾ ಸೋಂಕಿನ ಸಕ್ರಿಯ ಪ್ರಕರಣಗಳಿದ್ದು, ಈ ಮೂಲಕ ದೇಶದಲ್ಲಿ ಅತೀ ಹೆಚ್ಚು ಹೆಚ್ಚಿನ ಸೋಂಕಿನ ಪ್ರಕರಣ ಹೊಂದಿರುವ ಪಟ್ಟಿಯಲ್ಲಿ ಬೆಂಗಳೂರು 2ನೇ ಸ್ಥಾನವನ್ನು ಪಡೆದುಕೊಂಡಿದೆ. 

ಭಾನುವಾರ ಬೆಂಗಳೂರಿನಲ್ಲಿ 3,479 ಕೊರೋನಾ ಸೋಂಕು ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 1,70,662ಕ್ಕೆ ಏರಿಕೆಯಾಗಿದೆ. ಈ ಮೂಲಕ ವಾಣಿಜ್ಯ ನಗರಿ ಮುಂಬೈನ ನಗರವನ್ನು ಹಿಂದಿಕ್ಕಿ ಬೆಂಗಳೂರು ಮೂರನೇ ಸ್ಥಾನಕ್ಕೇರಿದೆ. 

ಶನಿವಾರ ಮುಂಬೈನಲ್ಲಿ ಬೆಂಗಳೂರಿಗಿಂತ ಕಡಿಮೆ 2,085 ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿವೆ. ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 1,69,741ಕ್ಕೆ ಏರಿಕೆಯಾಗಿದೆ. ಹೀಗಾಗಿ ಬೆಂಗಳೂರು ನಾಲ್ಕನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಜಿಗಿದಿದೆ. ಇನ್ನು ಮಹಾರಾಷ್ಟ್ರದ ಪುಣೆ ಮೊದಲ ಸ್ಥಾನದಲ್ಲಿ ಮುಂದುವರೆದಿದೆ. ಎರಡನೇ ಸ್ಥಾನದಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಇದೆ. 

ಬೆಂಗಳೂರಿನಲ್ಲಿ ಭಾನುವಾರ 3,370 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ 1,27,132ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 41,093ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ 45 ಮಂದಿ ಮೃತರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ 268 ಸೋಂಕಿತರು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ಕೊರೋನಾ ಸೋಂಕಿನ ಭೀತಿ ಆರಂಭವಾಗಿ 7 ತಿಂಗಳು ಕಳೆದಿದ್ದು, ದೇಶದ ಕೋವಿಡ್ ಹಾಟ್'ಸ್ಪಾಟ್ ಆಗಿದ್ದ ದೆಹಲಿ ಮತ್ತು ಮುಂಬೈ ನಗರಗಳಲ್ಲಿ ಸೋಂಕಿತರ ಏರಿಕೆ ಪ್ರಮಾಣದಲ್ಲಿ ಕೊಂಚ ಇಳಿಕೆ ಕಾಣುತ್ತಿದೆ. ಆದರೆ, ಪುಣೆ ಹಾಗೂ ಬೆಂಗಳೂರಿನಲ್ಲಿ ಏರಿಕೆ ಪ್ರಮಾಣ ಮುಂದುವರೆಯುತ್ತಲೇ ಇದೆ.

SCROLL FOR NEXT