ಸಿಸಿಬಿ ಪೊಲೀಸ್ ಕಚೇರಿ 
ರಾಜ್ಯ

ಸೂಕ್ಷ್ಮ ಪ್ರಕರಣಗಳ ವಿಚಾರಣೆಗಾಗಿ ಸಿಸಿಬಿಗೆ ಕಾನೂನು ತಜ್ಞರ ಅವಶ್ಯಕತೆ ಇದೆ: ಪೊಲೀಸ್ ಆಯುಕ್ತ ಕಮಲ್ ಪಂತ್

ಸೂಕ್ಷ್ಮ ಪ್ರಕರಣಗಳ ವಿಚಾರಣೆಗಾಗಿ ಕೇಂದ್ರೀಯ ಅಪರಾಧ ತನಿಖಾ ದಳಕ್ಕೆ ಕಾನೂನು ತಜ್ಞರ ಅವಶ್ಯಕತೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಬೆಂಗಳೂರು: ಸೂಕ್ಷ್ಮ ಪ್ರಕರಣಗಳ ವಿಚಾರಣೆಗಾಗಿ ಕೇಂದ್ರೀಯ ಅಪರಾಧ ತನಿಖಾ ದಳಕ್ಕೆ ಕಾನೂನು ತಜ್ಞರ ಅವಶ್ಯಕತೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗಿನ ಸಭೆ ಬಳಿಕ ಮಾತನಾಡಿದ ಕಮಲ್ ಪಂತ್ ಅವರು, ಡ್ರಗ್ಸ್ ನಂತಹ ಸೂಕ್ಷ್ಮ ವಿಚಾರಗಳನ್ನು ನಿಭಾಯಿಸುವ ಸಲುವಾಗಿ ಸಿಸಿಬಿಗೆ ಕಾನೂನು ತಜ್ಞರ ಅವಶ್ಯಕತೆ ಇದೆ. ಗಂಭೀರ ಮತ್ತು ಸೂಕ್ಷ್ಮ  ಪ್ರಕರಣಗಳನ್ನು ನಿರ್ವಹಿಸಲು ಸಿಸಿಬಿಗೆ ಸ್ವತಂತ್ರ ಕಾನೂನು ತಜ್ಞರನ್ನು ಒದಗಿಸಬೇಕು ಎಂದು ಹೇಳಿದರು.

ಬಳಿಕ ಮಾತನಾಡಿದ ಗೃಹ ಸಚಿವ ಬೊಮ್ಮಾಯಿ ಅವರು, ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ (ಎನ್‌ಡಿಪಿಎಸ್) ಅನ್ನು ಜಾರಿಗೊಳಿಸುವ ಅಧಿಕಾರ ಇದೆ. ನಿಯಮಗಳಲ್ಲಿನ ಬದಲಾವಣೆಗಳನ್ನು ಅನುಷ್ಠಾನಗೊಳಿಸುವ ಕುರಿತು ನಾವು ಕಾನೂನು  ತಜ್ಞರೊಂದಿಗೆ ಚರ್ಚಿಸುತ್ತೇವೆ. ಅಂತೆಯೇ ಯಾವುದೇ ಮಾಹಿತಿ ಮಾಧ್ಯಮಗಳಿಂದಾಗಲಿ ಅಥವಾ ವ್ಯಕ್ತಿಗಳು ಅಥವಾ ಸಂಸ್ಥೆಗಳಿಂದ ಸಿಕ್ಕರೆ,  ಯಾವುದೇ ಹೇಳಿಕೆಯಾಗಲಿ ಸಿಕ್ಕರೆ ಅದನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ ಕ್ರಮಕ್ಕಾಗಿ ತನಿಖೆ ನಡೆಸಬೇಕು ಎಂದು ನಾನು ಸಿಸಿಬಿಗೆ ನಿರ್ದೇಶನ ನೀಡಿದ್ದೇನೆ ಎಂದು  ಹೇಳಿದರು.

ಸಿಸಿಬಿಯ ಸಿಬ್ಬಂದಿ ಸಾಮರ್ಥ್ಯವನ್ನು ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದ ಗಡಿ ಜಿಲ್ಲೆಗಳಲ್ಲಿ ಅಧಿಕಾರಿಗಳನ್ನು ನೇಮಿಸಿ ಹೊರ ರಾಜ್ಯಗಳಿಂದ ರಾಜ್ಯಕ್ಕೆ ಅಕ್ರಮ ಚಟುವಟಿಕೆಗಳನ್ನು ತಡೆಯಲು ಕ್ರಮ ಕೈಗೊಳ್ಳಲಾಗುತ್ತದೆ. ಸಿಸಿಬಿ ಈಗಾಗಲೇ ಹಲವು ಅಪರಾಧ ಪ್ರಕರಣಗಳನ್ನು  ನಿರ್ವಹಿಸುತ್ತಿರುವುದರಿಂದ ಹೆಚ್ಚುವರಿ ಸಿಬ್ಬಂದಿಗಳ ಅವಶ್ಯಕತೆ ಇದೆ. ಹೀಗಾಗಿ ಸೂಕ್ಷ್ಮ ವಿಚಾರಗಳ ನಿರ್ವಹಣೆ ಕುರಿತು ಸಿಸಿಬಿ ದಳವನ್ನು ಮರುಸಂಘಟಿಸಲಾಗುತ್ತದೆ. ತಾಂತ್ರಿಕವಾಗಿ ಸಿಸಿಬಿಯ ಸಾಮರ್ಥ್ಯವನ್ನು ಹೆಚ್ಚಳ ಮಾಡಲಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ