ರಾಜ್ಯ

ಬೆಂಗಳೂರಿನಲ್ಲಿ ಪುನರಾರಂಭಗೊಂಡ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು!

Lingaraj Badiger

ಬೆಂಗಳೂರು: ಪ್ರಸಕ್ತ ಸಾಲಿನ ವೈದ್ಯಕೀಯ ಮತ್ತು ತಾಂತ್ರಿಕ ಕೋರ್ಸುಗಳಿಗೆ ಸಂಬಂಧಿಸಿದಂತೆ ಜೆಇಇ ಮತ್ತು ನೀಟ್ ಪರೀಕ್ಷೆಗಳು ಪ್ರಾರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಪುನರಾರಂಭಗೊಂಡಿವೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಊಟ, ವಸತಿ, ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಉತ್ತರ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು ದೂರವಾಣಿ ಸಂಖ್ಯೆ: ೯೪೮೦೮೪೩೦೫೧,
ಬೆಂಗಳೂರು ದಕ್ಷಿಣ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು ದೂರವಾಣಿ ಸಂಖ್ಯೆ: ೯೪೮೦೮೪೩೦೫೦, ಬೆಂಗಳೂರು ಪೂರ್ವ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು ದೂರವಾಣಿ ಸಂಖ್ಯೆ: ೯೪೮೦೮೪೩೦೪೯, ಆನೇಕಲ್ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು ದೂರವಾಣಿ ಸಂಖ್ಯೆ: ೯೪೮೦೮೪೩೦೫೨, ನ್ನು ಸಂಪರ್ಕಿಸಬಹುದಾಗಿದೆ. 

SCROLL FOR NEXT