ಸಿಎಂ ಯಡಿಯೂರಪ್ಪ 
ರಾಜ್ಯ

ಬೊಕ್ಕಸಕ್ಕೆ ಆದಾಯ ಖೋತಾ: 33 ಸಾವಿರ ಕೋಟಿ ಸಾಲ ಪಡೆಯಲು ರಾಜ್ಯ ಸರ್ಕಾರ ತೀರ್ಮಾನ

ಕೋವಿಡ್‌ನಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಆದಾಯ ನಿರೀಕ್ಷಿತ ಮಟ್ಟದಲ್ಲಿ ಬಾರದ ಹಿನ್ನೆಲೆಯಲ್ಲಿ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮಕ್ಕೆ ತಿದ್ದುಪಡಿ ತಂದು ವಿವಿಧ ಮೂಲಗಳಿಂದ 33 ಸಾವಿರ ಕೋಟಿ ರು.ಸಾಲ ಪಡೆಯುವ ಮಹತ್ವದ ತೀರ್ಮಾನವನ್ನು ಸಚಿವ ಸಂಪುಟ ಸಭೆ ಕೈಗೊಂಡಿದೆ.

ಬೆಂಗಳೂರು: ಕೋವಿಡ್‌ನಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಆದಾಯ ನಿರೀಕ್ಷಿತ ಮಟ್ಟದಲ್ಲಿ ಬಾರದ ಹಿನ್ನೆಲೆಯಲ್ಲಿ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮಕ್ಕೆ ತಿದ್ದುಪಡಿ ತಂದು ವಿವಿಧ ಮೂಲಗಳಿಂದ 33 ಸಾವಿರ ಕೋಟಿ ರು.ಸಾಲ ಪಡೆಯುವ ಮಹತ್ವದ ತೀರ್ಮಾನವನ್ನು ಸಚಿವ ಸಂಪುಟ ಸಭೆ ಕೈಗೊಂಡಿದೆ.

ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದೆ.ಆರ್ಥಿಕ ವಿತ್ತೀಯ ಕೊರತೆಯ ಇತಿಮಿತಿಯಲ್ಲಿಯೇ ಸಾಲ ಪಡೆಯಲು ಸರ್ಕಾರ ನಿರ್ಧರಿಸಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ, ಕೋವಿಡ್‌ನಿಂದಾಗಿ ರಾಜ್ಯ ಆರ್ಥಿಕ ಪರಿಸ್ಥಿತಿಗೆ ಪೆಟ್ಟು ಬಿದ್ದಿದ್ದು, ಅದನ್ನು ಸರಿದೂಗಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ.ಕೋವಿಡ್ ಪರಿಣಾಮ ರಾಜ್ಯದ ಬೊಕ್ಕಸಕ್ಕೆ ಬರುತ್ತಿದ್ದ ಆದಾಯ ಕಡಿಮೆಯಾಗಿದೆ.

ಆರ್ಥಿಕ ಪರಿಸ್ಥಿತಿಯನ್ನು ಸರಿದೂ ಗಿಸಲು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ಕಲ್ಪಿಸುವ ಉದ್ದೇಶದಿಂದ 33 ಸಾವಿರ ಕೋಟಿ ರು. ಸಾಲ ಪಡೆಯಲು ತೀರ್ಮಾನಿಸಲಾಗಿದೆ.ಹೊಸ ಪಡೆಯಲು ಅನುಕೂಲವಾಗಲು ಆರ್ಥಿಕ ಹೊಣೆಗಾರಿಕೆ ಅಧಿನಿಯಮಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಅಧಿನಿಯಮ ತಿದ್ದುಪಡಿಯಿಂದ ಸಾಲ ಪಡೆಯಲು ಅವಕಾಶವಾಗಲಿದೆ ಎಂದು ಹೇಳಿದರು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!