ರಾಜ್ಯ

ಬೆಂಗಳೂರು ಗಲಭೆ: ಪಿಎಫ್ಐ ನಿಷೇಧ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತಿದ ತೇಜಸ್ವಿ ಸೂರ್ಯ

Manjula VN

ಬೆಂಗಳೂರು: ಕಳೆದ ಆಗಸ್ಟ್ ತಿಂಗಳಿನಲ್ಲಿ ನಡೆದ ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳಿಗೆ ನಿಷೇಧ ಹೇರುವ ಕುರಿತು ಸಂಸತ್ತಿನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. 

ಟರ್ಕಿಶ್ ಯೂತ್ ಫೆಡರೇಶನ್ ಜೊತೆಗೆ ಜಮಾತ್-ಎ-ಇಸ್ಲಾಮಿಯ ವಿದ್ಯಾರ್ಥಿ ಸಂಘಟನೆ, ಸ್ಟೂಡೆಂಟ್ ಇಸ್ಲಾಮಿಕ್ ಸಂಘಟನೆಗಳು ಕೈಜೋಡಿಸಿರುವುದಾಗಿ ಹೇಳಲಾಗುತ್ತಿದ್ದು, ಈ ಸಂಘಟನೆಗಳ ಕುರಿತು ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಶ್ನಿಸಿದ್ದಾರೆ. 

ಈ ಪ್ರಶ್ನೆಗೆ ಗೃಹ ಸಚಿವಾಲಯ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಪರಿಸ್ಥಿತಿ ಎದುರಾದರೂ ಅಗತ್ಯ ಬಿದ್ದಾಗ ರಾಷ್ಟ್ರೀಯ ಭದ್ರತೆಗೆ ಧಕ್ಕೆಯುಂಟು ಮಾಡುವ, ಕಾನೂನುಗಳ ವಿರುದ್ಧ ನಡೆಯುವ ಸಂಘಟನೆಗಳ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದೆ ಎಂದು ತಿಳಿದುಬಂದಿದೆ. 

SCROLL FOR NEXT