ರಾಜ್ಯ

ಮೈಸೂರು: ಮೂರು ದಿನ ಚಾಮುಂಡೇಶ್ವರಿ ದೇವಾಲಯಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ

Srinivasamurthy VN

ಮೈಸೂರು: ನಾಳೆ ಮಹಾಲಯ ಅಮಾವಸ್ಯೆಯ ಹಿನ್ನಲೆಯಲ್ಲಿ ಮೈಸೂರಿನ ಖ್ಯಾತ ಚಾಮುಂಡೇಶ್ವರಿ ದೇಗುಲದಲ್ಲಿ ಮೂರು ದಿನಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬುಧವಾರದಿಂದ ಮೂರು ದಿನಗಳವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿದೆ.

ಚಾಮುಂಡಿ ಬೆಟ್ಟದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಬೆಟ್ಟಗಳಿಗೆ ಹೋಗುವ ರಸ್ತೆಯನ್ನು ಸಹ ಬ್ಯಾರಿಕೇಡ್ ಹಾಕಿ ಮುಚ್ಚಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುವ ನಿರೀಕ್ಷೆಯಿರುವುದರಿಂದ ಹಾಗೂ ಗುರುವಾರ ಮಹಾಲಯ ಅಮಾವಾಸ್ಯೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

SCROLL FOR NEXT