ಶಶಿಕಲಾ 
ರಾಜ್ಯ

2021ರ ಜ.27 ರಂದು ವಿ.ಕೆ.ಶಶಿಕಲಾ ಬಿಡುಗಡೆ!

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಗೆಳತಿ ವಿ.ಕೆ.ಶಶಿಕಲಾ ಅವರು ಬರುವ ಜನವರಿ 27 ರಂದು ಶಿಕ್ಷೆ ಅವಧಿ ಪೂರ್ಣಗೊಳಿಸಿ ಬಿಡುಗಡೆಯಾಗಲಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಗೆಳತಿ ವಿ.ಕೆ.ಶಶಿಕಲಾ ಅವರು ಬರುವ ಜನವರಿ 27 ರಂದು ಶಿಕ್ಷೆ ಅವಧಿ ಪೂರ್ಣಗೊಳಿಸಿ ಬಿಡುಗಡೆಯಾಗಲಿದ್ದಾರೆಂದು ತಿಳಿದುಬಂದಿದೆ.
 
2020 ಆಗಸ್ಟ್ 14ಕ್ಕೆ ಶಿಶಿಕಲಾ ಬಿಡುಗಡೆಯಾಗಿದ್ದಾರೆ. ಮುಂದಿನ ಬೆಳವಣಿಗೆ ಕಾದು ನೋಡಿ ಎಂದು ಜುಲೈನಲ್ಲಿ ಬಿಜೆಪಿ ವಕ್ತಾರ ಆಶೀರ್ವಾದಮ್ ಆಚಾರಿ ಟ್ವೀಟ್ ಮಾಡಿದ್ದರು. 

ಈ ಹೇಳಿಕೆ ತಮಿಳುನಾಡಿನ ರಾಜಕೀಯ ವಲಯದಲ್ಲಿ ಕಂಪನ ಮೂಡಿಸಿತ್ತು. ಆದರೆ, ಆ.14ರಂದು ಶಶಿಕಲಾ ಬಿಡುಗಡೆಯಾಗದೇ ಅವರ ಹೇಳಿಕೆ ಸುಳ್ಳಾಗಿತ್ತು. ಈ ಬೆನ್ನಲ್ಲೇ ಈಗ 2021ರ ಜ.27ಕ್ಕೆ ಬಿಡುಗಡೆ ಸಾಧ್ಯತೆ ಇರುವುದಾಗಿ ಮಾಹಿತಿ ಹಕ್ಕು ಕಾಯ್ದೆ ಅಡಿ ಸಾಮಾಜಿಕ ಕಾರ್ಯಕರ್ತ ನರಸಿಂಹ ಮೂರ್ತಿ ಸಲ್ಲಿಸಿದ್ದ ಅರ್ಜಿಗೆ ಜೈಲಿನ ಮುಖ್ಯ ಅಧೀಕ್ಷಕ ಪ್ರತಿಕ್ರಿಯೆ ನೀಡಿದ್ದಾರೆ. 

ಇದರೊಂದಿಗೆ ಜೈಲು ಶಿಕ್ಷೆ ಅವಧಿ ಮುಗಿಯುವ ಮುನ್ನವೇ ಬಿಡುಗಡೆಯಾಗಲಿದ್ದಾರೆಂಬುವ ವದಂತಿಗಳಿಗೆ ತೆರೆ ಬಿದ್ದಂತಾಗಿದೆ. 

2021ರ ಜ.27ಕ್ಕೆ ಶಶಿಕಲಾ ಸಜಾ ಅವಧಿ ಮುಗಿಯಲಿದೆ. ತೀರ್ಪಿನಂತೆ ರೂ.10 ಕೋಟಿ ದಂಡ ಪಾವತಿಸದಿದ್ದರೆ 2020ರ ಫೆ.27ರವರೆಗೆ ಶಿಕ್ಷೆ ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!