ಬಂಧಿತ ಆರೋಪಿಗಳು 
ರಾಜ್ಯ

ಬೆಂಗಳೂರು: ಇಬ್ಬರು ಡ್ರಗ್ಸ್ ಪೆಡ್ಲರ್ ಗಳ ಬಂಧಿಸಿದ ಸಿಸಿಬಿ ಪೊಲೀಸರು, ರೂ.4 ಲಕ್ಷ ಮೌಲ್ಯದ ವಸ್ತು ವಶ

ಜೆಲ್ಲಿ ಮಾದರಿಯ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆರೋಪಿಗಳಿಂದ 4 ಲಕ್ಷ ರೂ. ಬೆಲೆಯ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಜೆಲ್ಲಿ ಮಾದರಿಯ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆರೋಪಿಗಳಿಂದ 4 ಲಕ್ಷ ರೂ. ಬೆಲೆಯ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಕೊತ್ತನೂರು ನಿವಾಸಿ ಜಾನ್ ನಿಖೋಲಸ್ (21) ಹಾಗೂ ಜೆ.ಪಿ.ನಗರ 2ನೇ ಹಂತದ ನಿವಾಸಿ ಇರ್ಫಾನ್ ಶೇಖ್ (29) ಬಂಧಿತ ಆರೋಪಿಗಳು.

ಸೆ.16ರಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನಗರದ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಜಿ.ರಸ್ತೆ, ಆರ್ ಎಸ್ ಐ ಕಾಂಪೌಂಡ್ ಬಳಿ ಇಬ್ಬರು ವ್ಯಕ್ತಿಗಳು ಬಿಳಿ ಬಣ್ಣದ ಡಸ್ಟರ್ ಕಾರ್ ನಲ್ಲಿ ಮಾದಕ ವಸ್ತುಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಭಾತ್ಮೀದಾರರಿಂದ ಲಭ್ಯವಾಗಿದೆ. 

ತಕ್ಷಣ ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಾದಕ ವಸ್ತುಗಳಾದ ಎಲ್ ಎಸ್ ಡಿ ಪೇಪರ್, ಎಕ್ಸ್ ಟೆಸಿ ಮಾತ್ರೆಗಳು ಮತ್ತು ಟಿಎಚ್ ಸಿ ಜೆಲ್ಲಿಗಳನ್ನು ಮಾರಾಟ ಮಾಡಲು ಮುಂದಾಗಿದ್ದ ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ