ಕಟ್ಟಡ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಿಎಂ ಯಡಿಯೂರಪ್ಪ 
ರಾಜ್ಯ

ದೆಹಲಿ: ಕಾವೇರಿ ಕರ್ನಾಟಕ ಭವನ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಸಿಎಂ ಯಡಿಯೂರಪ್ಪ ಚಾಲನೆ

ರಾಷ್ಟ್ರ ರಾಜಧಾನಿ ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಕಾವೇರಿ ಕರ್ನಾಟಕ ಭವನ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದಾರೆ. 

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಕಾವೇರಿ ಕರ್ನಾಟಕ ಭವನ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದಾರೆ. 

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ ದೆಹಲಿಯ ಕರ್ನಾಟಕ ಭವನ -1 ಕಾವೇರಿ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ‌ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾಮಗಾರಿಗೆ ಚಾಲನೆ ನೀಡಿದ್ದಾರೆ. 

ಈ ಕಾಮಗಾರಿಯು ರೂ.87 ಕೋಟಿ ವೆಚ್ಚದಾಗಿದ್ದು ರಾಜ್ಯದಿಂದ ಬರುವ ಗಣ್ಯ ವ್ಯಕ್ತಿಗಳ ವಾಸ್ತವ್ಯಕ್ಕಾಗಿ ನಿರ್ಮಾಣ ಮಾಡಲಾಗುತ್ತಿದೆ.

ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಡಿ ವಿ ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮುಂತಾದವರು ಉಪಸ್ಥಿತರಿದ್ದರು.

ಸಿಎಂ ಬಿಎಸ್ ವೈ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆ ನಡೆಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!