ರಾಜ್ಯ

ಡ್ರಗ್ಸ್ ಪ್ರಕರಣ: ಸಂಜನಾ ಗಲ್ರಾನಿ ಜಾಮೀನು ಅರ್ಜಿ ಸೆ.19ಕ್ಕೆ ಮುಂದೂಡಿಕೆ

Lingaraj Badiger

ಬೆಂಗಳೂರು: ಡ್ರಗ್‌ ಮಾಫಿಯಾ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಬಾಲಿವುಡ್‌ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಯನ್ನು ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯ ಶನಿವಾರಕ್ಕೆ ಮುಂದೂಡಿದೆ.

ಸಂಜನಾ ಅವರು ಡ್ರಗ್‌ ಮಾಫಿಯಾ ದಂಧೆಯಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದು, ಅವರನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸಂಜನಾ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ವಿಶೇಷ ಕೋರ್ಟ್, ಈ ಸಂಬಂಧ ಸಿಸಿಬಿಗೆ ನೋಟಿಸ್ ನೀಡಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ನಾಳೆ ಉಳಿದ ಆರೋಪಿಗಳ ವಿಚಾರಣೆಯೂ ನಡೆಯಲಿದೆ ಎಂದು ಕೋರ್ಟ್ ತಿಳಿಸಿದೆ.

ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮತ್ತೊಬ್ಬ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿ ವಿಚಾರಣೆ ಸಹ ನಾಳೆ ನಡೆಯಲಿದೆ. ಈ ಇಬ್ಬರೂ ನಟಿಯರ ಜಾಮೀನು ಅರ್ಜಿ ವಿಚಾರಣೆ ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆಯಲಿದೆ ಎನ್ನಲಾಗಿದೆ.

SCROLL FOR NEXT