ಬಂಧಿತ ಆರೋಪಿಗಳು 
ರಾಜ್ಯ

ಬಂಧಿತ ಡ್ಯಾನ್ಸರ್ ಕಿಶೋರ್ ಮುಂಬೈನಿಂದ ಡ್ರಗ್ಸ್ ತಂದು ಮಾರುತ್ತಿದ್ದ: ಮಂಗಳೂರು ಪೋಲೀಸರಿಂದ ಸ್ಫೋಟಕ ಮಾಹಿತಿ

ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಅವರು ಸೆಪ್ಟೆಂಬರ್ 19 ರ ಶನಿವಾರ ಬಂಧಿಸಲ್ಪಟ್ಟ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಶೆಟ್ಟಿಯೊಂದಿಗೆ ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾಗಿ ದೃಢಪಡಿಸಿದ್ದಾರೆ.

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಅವರು ಸೆಪ್ಟೆಂಬರ್ 19 ರ ಶನಿವಾರ ಬಂಧಿಸಲ್ಪಟ್ಟ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಶೆಟ್ಟಿಯೊಂದಿಗೆ ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾಗಿ ದೃಢಪಡಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೊಲೀಸ್ ಆಯುಕ್ತರು, ಕುಳಾಯಿ ನಿವಾಸಿ  ಕಿಶೋರ್ ಅಮನ್ ಶೆಟ್ಟಿ (30) ಜೊತೆಗೆ, ಸುರತ್ಕಲ್ ನಿವಾಸಿ ಅಕೀಲ್ ನೌಶೀಲ್ (28) ಎಂಬ ವ್ಯಕ್ತಿಯನ್ನು ಎಂಡಿಎಂಎ (ಮೀಥಿಲೀನ್ ಡ್ರಾಕ್ಸಿ ಮೆಥಾಂಫೆಟಮೈನ್) ಹೊಂದಿದ್ದಕ್ಕಾಗಿ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದು ಆರೋಗ್ಯಕ್ಕೆ ಹಾನಿಕಾರಕವಾದ್ದರಿಂದ ಇದನ್ನು ನಿಷೇಧಿಸಲಾಗಿದೆ.

"ಸಿಸಿಬಿ ಪೊಲೀಸರು ಇಂದು ಬೆಳಿಗ್ಗೆ ಆರೋಪಿಗಳನ್ನು ಬಂಧಿಸಿದ್ದಾರೆ. ಅವರು ಮುಂಬೈನಿಂದ ಡ್ರಗ್ಸ್ ಗಳನ್ನು ತಂದು ಅದನ್ನು ಮಂಗಳೂರಿನಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ" ಎಂದು ಆಯುಕ್ತರು ತಿಳಿಸಿದ್ದಾರೆ. ಒಟ್ಟು 1 ಲಕ್ಷ ಮೌಲ್ಯದ ಎಂಡಿಎಂಎ, ಬಜಾಜ್ ಡಿಸ್ಕವರ್ ಬೈಕ್, ಎರಡು ಮೊಬೈಲ್ ಫೋನ್ ಗಳನ್ನು  ಪೊಲೀಸರು ವಶಪಡಿಸಿಕೊಂಡಿದ್ದಾರೆ.

"ಅಕೀಲ್ ಸುರಕ್ಷತಾ ಅಧಿಕಾರಿಯಾಗಿ( safety officer) ವಿದೇಶದಲ್ಲಿ ಕೆಲಸ ಮಾಡುತ್ತಿದ್ದ. ಅವನು  ಕಳೆದ ವರ್ಷ ಇಲ್ಲಿಗೆ ಮರಳಿದ್ದ. ಮುಂಬೈ ಮತ್ತು ಬೆಂಗಳೂರಿನಂತಹ ನಗರಗಳಿಂದ ಡ್ರಗ್ಸ್ ಖರೀದಿಸಿ ಇಲ್ಲಿ ಮಾರಾಟ ಮಾಡುತ್ತಿದ್ದ. ಇನ್ನೊಬ್ಬ ಆರೋಪಿ ಕಿಶೋರ್ ಅಮನ್ ಶೆಟ್ಟಿ ಅವರು ಪ್ರಸಿದ್ಧ ಡ್ಯಾನ್ಸರ್ ಮತ್ತು ನೃತ್ಯ ಸಂಯೋಜಕರಾಗಿದ್ದಾರೆ ಹಿಂದಿ ಚಿತ್ರಗಳಲ್ಲಿ ನಟಿಸಿರುವ ಇವರು ಸುವರ್ಣ ಕನ್ನಡ ಚಾನಲ್ ನ ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಹೆದ್ದಿದ್ದರು. 

"ಅಕೀಲ್ ಜೊತೆಗೆ, ಕಿಶೋರ್ ಕೂಡ ಎಂಡಿಎಂಎಯನ್ನು ಮಾರಾಟ ಮಾಡುವಲ್ಲಿ ಭಾಗಿಯಾಗಿದ್ದನು. ಇಬ್ಬರನ್ನೂ ಮಾದಕ ದ್ರವ್ಯ ಸೇವನೆ ಮತ್ತು ಬಳಕೆಗಾಗಿ ಬಂಧಿಸಲಾಗಿದೆ" ಎಂದು ಆಯುಕ್ತರು ತಿಳಿಸಿದ್ದಾರೆ.

"ನಾವು ಮುಂಬೈಗೆ ಡ್ರಗ್ಸ್ ನಂಟಿರುವ ಬಗ್ಗೆ  ತನಿಖೆ ಮಾಡುತ್ತೇವೆ ಮತ್ತು ಸಂಪೂರ್ಣ ಲಿಂಕ್ ಅನ್ನು ಪತ್ತೆ ಮಾಡುತ್ತೇವೆ ಮತ್ತು ಅದರಲ್ಲಿ ಯಾರು ಭಾಗಿಯಾಗಿದ್ದಾರೆ ಅವರ ವಿರುದ್ಧ   ಕ್ರಮ ತೆಗೆದುಕೊಳ್ಳುತ್ತೇವೆ. ಪಾರ್ಟಿಗಳಲ್ಲಿ ಪಾಲ್ಗೊಳ್ಳುವಿಕೆಯ ಮಾಹಿತಿಯೂ ನಮ್ಮಲ್ಲಿದೆ ಮತ್ತು ನಾವು ಅದನ್ನು ಮತ್ತಷ್ಟು ಪರಿಶೀಲಿಸುತ್ತೇವೆ" ಎಂದು ಅವರು ಹೇಳಿದರು. ಪೊಲೀಸರು ಆರೋಪಿಗಳ ವಶಕ್ಕೆ ಪಡೆಯುತ್ತಾರೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚುತ್ತಾರೆ ಎಂದು ಅವರು ಹೇಳಿದರು. "ಈ ಪ್ರಕರಣವನ್ನು ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಿಸಲಾಗಿದ್ದು, ಎಲ್ಲ ಅಂಶಗಳನ್ನು ತನಿಖೆ ಮಾಡಲಾಗುವುದು. ನಮಗೆ ಈಗಾಗಲೇ ಕೆಲವು ಸುಳಿವು ಸಿಕ್ಕಿದೆ" ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಇನ್ಸ್‌ಪೆಕ್ಟರ್ ಶಿವಪ್ರಕಾಶ್, ಆರ್ ನಾಯಕ್, ಆರ್ಥಿಕ ಮಾದಕವಸ್ತು ತನಿಖಾಧಿಕಾರಿ ರಾಮಕೃಷ್ಣ, ಸಿಸಿಬಿ ಪಿಎಸ್‌ಐ ಕಬ್ಬಲ್‌ರಾಜ್  ಮತ್ತಿತರರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT