ಸಾಂದರ್ಭಿಕ ಚಿತ್ರ 
ರಾಜ್ಯ

ಗಾಯಗೊಂಡಿದ್ದ ಮರಿಯಾನೆ ಮೇಲೆ ದಾಳಿ ಮಾಡಿ ಕೊಂದ ಹುಲಿ; ಬಂಡೀಪುರ ಅರಣ್ಯದಲ್ಲಿ ಘಟನೆ

ಗಾಯಗೊಂಡಿದ್ದ ಮರಿಯಾನೆಯನ್ನು ಹುಲಿಯೊಂದು ಬೇಟೆಯಾಡಿ ತಿಂದಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.

ಚಾಮರಾಜನಗರ: ಗಾಯಗೊಂಡಿದ್ದ ಮರಿಯಾನೆಯನ್ನು ಹುಲಿಯೊಂದು ಬೇಟೆಯಾಡಿ ತಿಂದಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.

ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಲೊಕ್ಕೆರೆಯಲ್ಲಿ ಈ ನಡೆದಿದ್ದು, ಗಾಯಗೊಂಡಿದ್ದ ಮರಿಯಾನೆಯನ್ನು ಬೇಟೆಯಾಡಿದ ಹುಲಿ ಅದನ್ನು ತಿಂದಿದೆ. ಮೃತಪಟ್ಟ ಗಂಡು ಮರಿಯಾನೆ ಸುಮಾರು 5 ರಿಂದ 6 ವರ್ಷದಾಗಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ತಾಯಿ ಆನೆಯಿಂದ ಬೇರ್ಪಟ್ಟ ಬಳಿಕ ಈ ಆನೆ ಗಾಯಗೊಂಡಿತ್ತು. ನಂತರ ಈ ಆನೆಯನ್ನು ಹುಲಿ ಬೇಟೆಯಾಡಿದೆ ಎಂದು ಸಿಎಫ್ಒ ಬಾಲಚಂದ್ರ ತಿಳಿಸಿದ್ದಾರೆ. 

ಗಸ್ತಿನಲ್ಲಿದ್ದ ಸಿಬ್ಬಂದಿಗೆ ಆನೆ ಕಳೆಬರ ಕಾಣಿಸಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದ್ದು, ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಶನಿವಾರವಾದ ಇಂದು ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ವರದಿ: ಗುಳಿಪುರ ನಂದೀಶ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT