ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮುಂದಿನ ಮೂರು ದಿನಗಳಲ್ಲಿ ಸಾಧಾರಣ ಮಳೆ: ಕರವಾಳಿಯಲ್ಲಿ ರೆಡ್ ಅಲರ್ಟ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರ ರಾತ್ರಿ 8.30ರವರೆಗೆ ನಗರದಲ್ಲಿ ಸುಮಾರು 20 ಮಿಮೀ ಮಳೆಯಾಗಿದೆ, ಎಚ್ ಎಎಲ್ ಏರ್ ಪೋರ್ಟ್ ನಲ್ಲಿ 14 ಮಿಮಿ ಮಳೆಯಾಗಿದ್ದು, ಮರ ಉರುಳಿ ಬಿದ್ದಿರುವ ಅಥವಾ ರಸ್ತೆಗಳು ಜಲಾವೃತವಾಗಿರುವ ವರದಿಯಾಗಿಲ್ಲ ಎಂದು ಬಿಬಿಎಂಪಿ ತಿಳಿಸಿದೆ.

ರಾಜ್ಯಾದ್ಯಂತ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ. ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಭಾನುವಾರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯದಲ್ಲಿ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ. ಸೆ.23ರವರೆಗೆ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

ನೈಋುತ್ಯ ಮುಂಗಾರು ಕರಾವಳಿ ಹಾಗೂ ಮಲೆನಾಡಿನಲ್ಲಿ ಚುರುಕಾಗಿದ್ದು, ಉತ್ತರ ಒಳನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ. ಶನಿವಾರ ಮಧ್ಯಾಹ್ನದಿಂದಲೇ ಮೂರು ದಿನ ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿಅತಿ ಭಾರಿ ಮಳೆಯಾಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!