ಸಂಗ್ರಹ ಚಿತ್ರ 
ರಾಜ್ಯ

ಬಿಎಂಟಿಸಿ ಬಸ್ಸಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದರೆ ಅಮಾನತು ಶಿಕ್ಷೆ: ಚಾಲಕ ನಿರ್ವಾಹಕರಿಗೆ ಸರ್ಕಾರ ಎಚ್ಚರಿಕೆ!

ಕೊರೋನಾ ಸೋಂಕು ಹರಡುವುದನ್ನು ತಡೆಯಲು ಹಲವು ಷರತ್ತುಗಳನ್ನು ವಿಧಿಸಿ ಸಂಚಾರ ಪ್ರಾರಂಭಿಸಿರುವ ಬಿಎಂಟಿಸಿ ಬಸ್'ಗಳಲ್ಲಿ ಆಸನಗಳಿಗಿಂತ ಹೆಚ್ಚಿನ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿರುವ ಚಾಲಕ ಮತ್ತು ನಿರ್ವಾಹಕರನ್ನು ಅಮಾನತು ಮಾಡಲು ಸರ್ಕಾರ ಮುಂದಾಗಿದೆ. 

ಬೆಂಗಳೂರು: ಕೊರೋನಾ ಸೋಂಕು ಹರಡುವುದನ್ನು ತಡೆಯಲು ಹಲವು ಷರತ್ತುಗಳನ್ನು ವಿಧಿಸಿ ಸಂಚಾರ ಪ್ರಾರಂಭಿಸಿರುವ ಬಿಎಂಟಿಸಿ ಬಸ್'ಗಳಲ್ಲಿ ಆಸನಗಳಿಗಿಂತ ಹೆಚ್ಚಿನ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿರುವ ಚಾಲಕ ಮತ್ತು ನಿರ್ವಾಹಕರನ್ನು ಅಮಾನತು ಮಾಡಲು ಸರ್ಕಾರ ಮುಂದಾಗಿದೆ. 

ಕೊರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಬಸ್ ಗಳಲ್ಲಿ ಆಸನಗಳಿರುವಷ್ಟು ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ, ಆಸನಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಹತ್ತಿಸಿಕೊಂಡು, ಬಸ್'ಗಳಲ್ಲಿ ನಿಂತು ಪ್ರಯಾಣಿಸುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ. ಒಂದು ವೇಳೆ ಬಸ್ ಗಳಲ್ಲಿ ನಿಂತು ಪ್ರಯಾಣಿಸುತ್ತಿರುವುದು ಕಂಡು ಬಂದರೆ, ಚಾಲಕ ಮತ್ತು ನಿರ್ವಾಹಕರನ್ನು ಅಮಾನತುಗೊಳಿಸಲು ನಿರ್ಧರಿಸಲಾಗಿದೆ. ಈ ಕುರಿತು ನಿಗಮದಿಂದ ಸೂಚನೆ ನೀಡಲಾಗಿತ್ತಾದರೂ, ಅದರ ಬಗ್ಗೆ ಚಾಲಕ ಮತ್ತು ನಿರ್ವಾಹಕರು ಎಚ್ಚರವಹಿಸಿರಲಿಲ್ಲ. 

ಇದೀಗ ಸೂಚನೆಯನ್ನು ಉಲ್ಲಂಘಿಸಿ ಹೆಚ್ಚಿನ ಪ್ರಯಾಣಿಕರನ್ನು ಬಸ್ ಒಳಗೆ ಹತ್ತಿಸಿಕೊಳ್ಳುತ್ತಿರುವ ಬಗ್ಗೆ ದೂರು ಬಂದ ಕಾರಣ, ಅಂತಹ ಚಾಲಕರನ್ನು ಅಮಾನತುಗೊಳಿಸಿ ಆದೇಶಿಸಲಾಗುತ್ತಿದೆ. ಅದರಂತೆ ಸೆ.15ರಂದು ಯಶವಂತಪುರ ಡಿಪೋದ ಕೆಎ57 ಎಫ್1415 ಸಂಖ್ಯೆಯ ಬಸ್ ಚಾಲನೆ ಮಾಡುತ್ತಿದ್ದ ಸಣ್ಣೆಕೆಪ್ಪ ಹೂಕ್ರಾಣಿ ಎಂಬ ಚಾಲಕರು ರಾತ್ರಿ ವೇಳೆ ನಿಗದಿಗಿಂತ ಹೆಚ್ಚಿನ ಜನ್ನು ಬಸ್ ನಲ್ಲಿ ಹತ್ತಿಸಿಕೊಂಡಿದ್ದರು. ಈ ಕುರಿತಂತೆ ಘಟಕ ವ್ಯವಸ್ಥಾಕರಿಗೆ ದೂರು ಬಂದಿತ್ತು. ದೂರನ್ನಾಧರಿಸಿ ಘಟಕ ವ್ಯವಸ್ಥಾಪಕರು ಸಣ್ಣೆಕೆಪ್ಪ ಅವರನ್ನು ಅಮಾನತು ಮಾಡಿದ್ದು, ಮುಂದಿನ ತನಿಖೆಗೆ ಆದೇಶಿಸಿದ್ದಾರೆ. 

ಆದೇಶ ರದ್ದುಪಡಿಸುವಂತೆ ಬಿಎಂಟಿಸಿಗೆ ನೌಕರರ ಪತ್ರ
ಕೋವಿಡ್ ನಿಯಮ ಉಲ್ಲಂಘಿಸಿದ್ದ ನೌಕರರನ್ನು ಅಮಾನತು ಮಾಡಿರುವ ಆದೇಶವನ್ನು ರದ್ದು ಮಾಡುವಂತೆ ನೌಕರರು ಬಿಎಂಟಿಸಿಗೆ ಪತ್ರ ಬರೆದಿದ್ದಾರೆ.

ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಪ್ರಧಾನ ಕಾರ್ಯದರ್ಶಿ ಡಿ ಎ ವಿಜಯ್ ಭಾಸ್ಕರ್ ಮಾತನಾಡಿ, ಜನರ ಸಂಖ್ಯೆ ಹೆಚ್ಚಾಗಿರುವ ಪರಿಸ್ಥಿತಿಯಲ್ಲಿ ಏನು ಮಾಡಬೇಕೆಂಬುದರ ಕುರಿತು ಕೇಂದ್ರ ಅಥವಾ ರಾಜ್ಯ ಸರ್ಕಾರವಾಗಲೀ ಯಾವುದೇ ರೀತಿಯ ಮಾರ್ಗಸೂಚಿಗಳನ್ನು ನೀಡಿಲ್ಲ. ದಿನದ ಅಂತಿಮ ಟ್ರಿಪ್ ನಲ್ಲಿ ಹೆಚ್ಚೆಚ್ಚು ಜನರು ಬಸ್ ಹತ್ತಲು ಬರುತ್ತಾರೆ. ಇಂತಹ ಸಂದರ್ಭದಲ್ಲಿ ಜನರನ್ನು ನಿಯಂತ್ರಿಸುವುದು ನಿರ್ವಾಹಕರಿಗೆ ಕಷ್ಟವಾಗಿರುತ್ತದೆ. ಈ ಹಿಂದೆ ಕೂಡ ಸಾರಿಗೆ ನಿಗಮ ಚಾಲಕ ಹಾಗೂ ನಿರ್ವಾಹಕರನ್ನು ಅಮಾನತು ಮಾಡಿದ್ದು, ಇದೀ ಎರಡನೇ ಘಟನೆಯಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT