ರಾಜ್ಯ

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಮಂಗಳೂರು ವಿಶ್ವವಿದ್ಯಾನಿಲಯದ ಪದವಿ, ಪಿಜಿ ಪರೀಕ್ಷೆ ಮುಂದೂಡಿಕೆ

Raghavendra Adiga

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ನಡೆಸಬೇಕಿದ್ದ  ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.

ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ (ಪರೀಕ್ಷೆ) ಡಾ. ಪಿ.ಎಲ್. ಧರ್ಮಸೆಪ್ಟೆಂಬರ್ 20 ರ ಭಾನುವಾರದಂದು ಪರೀಕ್ಷೆಗಳನ್ನು ಮುಂದೂಡುವುದಾಗಿ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ, ಸೆಪ್ಟೆಂಬರ್ 21 ಸೋಮವಾರ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಮಂಗಳವಾರ ಸೆಪ್ಟೆಂಬರ್ 22 ರಂದು ನಡೆಯಲಿರುವ ಪರೀಕ್ಷೆಗಳ ಬಗ್ಗೆ ನಾಳೆ ನಿರ್ಧಾರ ಪ್ರಕಟವಾಗಲಿದೆ.

ಎರಡು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ಥವಾಗಿದೆ. ತಗ್ಗು ಪ್ರದೇಶಗಳು ಮುಳುಗಡೆಯಾಗಿದ್ದು  ಹಲವಾರು ಪ್ರದೇಶಗಳಲ್ಲಿ ನೀರು ಹರಿಯುತ್ತಿದೆ. ಒ:ಳ ರಸ್ತೆ ಹಾಗೂ ಮುಖ್ಯ ರಸ್ತೆಗಳು ಸಹ ನೀರಿನ ಕಾರಣ ಸಂಪರ್ಕ ಕಳೆದುಕೊಂಡಿದೆ.  ಈ ಕಾರಣದಿಂದಾಗಿ, ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗುವುದು ಅಸಾಧ್ಯವಾದ ಕಾರಣ ಪರೀಕ್ಷೆ ಮುಂದೂಡಿಕೆಯಾಗಿದೆ. ಪರೀಕ್ಷೆಗಳಿಗೆ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಡಾ.ಧರ್ಮ ಹೇಳಿದರು.

SCROLL FOR NEXT