ರಾಜ್ಯ

ಕರ್ನಾಟಕದಲ್ಲಿ ಇಂದು ಕೊರೋನಾಗೆ 122 ಬಲಿ; 9,925 ಗುಣಮುಖ, 7,339 ಮಂದಿಗೆ ಪಾಸಿಟಿವ್

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಬರೋಬ್ಬರಿ 7,339 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 122 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,145ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 32 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 122 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,886 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,97,646ಕ್ಕೆ ಏರಿಕೆಯಾಗಿದೆ.

ಇಂದು 9,925 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 4,23,377ಕ್ಕೆ ಏರಿಕೆಯಾಗಿದೆ. 95,335 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

SCROLL FOR NEXT